ಬೆಂಗಳೂರು: ರಾಜ್ಯ ಸರ್ಕಾರವು ರಾತ್ರೋರಾತ್ರಿ ೨೫ ಐಪಿಎಸ್ ಅಧಿಕಾರಿಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ವರ್ಗಾವಣೆ ಮಾಡಿದ್ದು, ಕೂಡಲೇ ವರ್ಗಾವಣೆಯಾಗಿರುವ ಜಾಗಕ್ಕೆ ವರದಿ ಮಾಡಿಕೊಳ್ಳುವಂತೆಯೂ ಸೂಚನೆ ನೀಡಿದೆ. ಆದರೆ, ಸರ್ಕಾರದ ವರ್ಗಾವಣೆಯ ಆದೇಶದಲ್ಲಿ ಹಲವು ಅಚ್ಚರಿಯ ಹೆಸರುಗಳು ಇವೆ.
ಅಲ್ಲದೇ ಪ್ರಜ್ವಲ್ ರೇವಣ್ಣ ಹಾಗೂ ಬಿ.ಎಸ್ ಯಡಿಯೂರಪ್ಪ ಅವರ ಪ್ರಕರಣಗಳ ತನಿಖೆಯನ್ನು ನಡೆಸುತ್ತಿದ್ದ ಅಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ. ಆದರೆ, ಹೆಚ್ಚುವರಿಯಾಗಿ ಆ ಪ್ರಕರಣಗಳಲ್ಲಿ ಉಸ್ತುವಾರಿ ವಹಿಸಿದ್ದ ಆ ಆಧಿಕಾರಿಗಳು ಇನ್ನೂ ಆ ಪ್ರಕರಣಗಳ ತನಿಖೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಜತೆಗೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹುಬ್ಬಳ್ಳಿಯ ಅವಳಿ ಕೊಲೆ ಪ್ರಕರಣಗಳು, ಹಾಗೂ ದಾವಣಗೆರೆಯ ಲಾಕಪ್ ಡೆತ್ ಹಾಗೂ ದೊಂಬಿ ಪ್ರಕರಣಗಳಿಂದ ಮುಜುಗರ ಅನುಭವಿಸಿದ್ದ ಸರ್ಕಾರ ಅಲ್ಲಿನ ಹಿರಿಯ ಅಧಿಕಾರಿಗಳನ್ನೂ ವರ್ಗಾಯಿಸಿ ಆದೇಶ ನೀಡಿದೆ.