Sunday, April 20, 2025
Google search engine

Homeರಾಜ್ಯಪಾರದರ್ಶಕ-ತ್ವರಿತ-ಜನಪರ ಸೇವೆ ನೀಡಬೇಕು : ಸಚಿವ ಕೃಷ್ಣಬೈರೇಗೌಡ

ಪಾರದರ್ಶಕ-ತ್ವರಿತ-ಜನಪರ ಸೇವೆ ನೀಡಬೇಕು : ಸಚಿವ ಕೃಷ್ಣಬೈರೇಗೌಡ

ಶಿವಮೊಗ್ಗ: ಜನರ ನಿರೀಕ್ಷೆಯನ್ನು ಅರ್ಥ ಮಾಡಿಕೊಂಡು ತ್ವರಿತವಾಗಿ, ಜನಪರ ಸೇವೆಯನ್ನು ನೀಡಬೇಕೆಂದು ಕಂದಾಯ ಇಲಾಖೆ ಅಧಿಕಾರಿಗಳು/ಸಿಬ್ಬಂದಿಗಳಿಗೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗದ್ದ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಇರುವುದು ಜನ ಜೀವನ ಸುಲಲಿತಗೊಳಿಸುವುದಕ್ಕೆ. ಜನರು ಹೆಚ್ಚಾಗಿ ಬರುವುದು ಮಾತೃ ಇಲಾಖೆಯಾಗಿರುವ ಕಂದಾಯ ಇಲಾಖೆಗೆ. ಆದ್ದರಿಂದ ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಂಡು ಅವರನ್ನು ಹೆಚ್ಚು ಅಲೆದಾಡಿಸದೇ ಗುಣಮಟ್ಟದ ಮತ್ತು ತ್ವರಿತ ಸೇವೆಯನ್ನು ನೀಡಬೇಕು. ಈ ನಿಟ್ಟಿನಲ್ಲಿ ಆಡಳಿತ ಯಂತ್ರದಲ್ಲಿ ಬದಲಾವಣೆಗಳನ್ನು ತರಲಾಗುತ್ತಿದೆ, ಅದನ್ನು ಪರಿಣಾಮಕಾರಿಯಾಗಿ ಅಧಿಕಾರಿ/ಸಿಬ್ಬಂದಿ ವರ್ಗದವರು ಅನುಷ್ಟಾನಕ್ಕೆ ತರಬೇಕೆಂದರು.

ಜಿಲ್ಲೆಯಲ್ಲಿ 97 ಸಾವಿರ ಫಾರ್ಮ್ 57 ಅರ್ಜಿಗಳು ಬಂದಿವೆ. ಇವನ್ನು ಇತ್ಯರ್ಥಪಡಿಸಲು ಸಮಿತಿ ರಚನೆ ಮಾಡಲಾಗುವುದು. ಸದರಿ ಸಮಿತಿಯು ನಿಜವಾದ ಬಡ ಸಾಗುವಳಿದಾರರನ್ನು ಗುರುತಿಸಿ ಅವರ ಜಮೀನಿಗೆ ತ್ವರಿತವಾಗಿ ಹಕ್ಕುಪತ್ರ ನೀಡುವ ಕೆಲಸ ಆಗಬೇಕು. ರೈತರ ಹೆಸರಿನಲ್ಲಿ ಬೇರೆಯವರು ಭೂಮಿ ಕಬಳಿಸುವಂತಾಗಬಾರದು. ಕಡೂರು ತಾಲ್ಲೂಕಿನಲ್ಲಿ ಅನರ್ಹರಿಗೆ ಸಾವಿರಾರು ಎಕರೆ ಜಮೀನು ಮಂಜೂರು ಮಾಡಿದ ಅಧಿಕಾರಿಗಳ ವಿರುದ್ದ ಶಿಸ್ತಿನ ಕ್ರಮ ವಹಿಸಲಾಗಿದೆ. ಆದ್ದರಿಂದ ಬಹಳ ಎಚ್ಚರಿಕೆಯಿಂದ ಅಧಿಕಾರಿಗಳು ಕೆಲಸ ಮಾಡಬೇಕು. ಅರ್ಹರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು.

ಶಿವಮೊಗ್ಗದಲ್ಲಿ ಭೂಮಿ ಮಂಜೂರಾತಿ ವಿಷಯದಲ್ಲಿ ಹೆಚ್ಚಿನ ಸಮಸ್ಯೆಗಳಿವೆ. ಜಿಲ್ಲಾಧಿಕಾರಿಗಳು ಶರಾವತಿ ಸಂತ್ರಸ್ತರು, ಹಾಗೂ ಇತರೆ ಭೂಮಿ ಮಂಜೂರಾತಿ ಕುರಿತು ನನ್ನ ಗಮನಕ್ಕೆ ತಂದಿದ್ದಾರೆ. ಅರಣ್ಯ ಮತ್ತು ಕಂದಾಯ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಇದನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು.

ಶರಾವತಿ ಸಂತ್ರಸ್ತರಿಗೆ ಪರಿಹಾರ ಒದಗಿಸಲು ತಜ್ಞರ ಸಮಿತಿ ರಚಿಸಿ ಪರಿಹಾರಕ್ಕೆ ಪ್ರಯತ್ನಿಸಲಾಗುತ್ತಿದೆ. ಸರ್ಕಾರದಿಂದ ಈ ಕುರಿತು ಸೆಟ್ಲ್‍ಮೆಂಟ್ ಮಾಡಲು ‘ಸೆಟ್ಲ್‍ಮೆಂಟ್ ಆಫೀಸರ್’ ನೇಮಕ ಮಾಡಲಾಗುತ್ತಿದೆ. ಶೇ.50 ಕಂದಾಯ ಭೂಮಿ ಇದ್ದರೆ, ಶೇ.50 ಅರಣ್ಯ ಭೂಮಿ ಈ ರೀತಿ ಸಮಸ್ಯೆಗಳಿವೆ. ಭೂಮಿ ಸರ್ವೇ ಕಾರ್ಯ ತ್ವರಿತವಾಗಿ ಆಗಬೇಕಿದೆ.ಅದಕ್ಕೆ ಲೈಸನ್ಸ್ಡ್ ಸರ್ವೇಯರ್ ಅಗತ್ಯವಿದೆ ಎಂದು ಜಿಲ್ಲಾಧಿಕರಿಗಳು ತಿಳಿಸಿದ್ದು, ಭೂಮಾಪನ ಇಲಾಖೆ ಆಯುಕ್ತರು ಅಕ್ಕಪಕ್ಕದ ಜಿಲ್ಲೆಯ ಸರ್ವೇಯರ್ ಅಥವಾ ನೇಮಕಾತಿ ಹೊಂದಿದ ಸರ್ವೇಯರ್‍ನ್ನು ನಿಯೋಜಿಸುವಂತೆ ಹಾಗೂ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಹಕರಿಸುವಂತೆ ತಿಳಿಸಿದರು. ಆರ್‍ಟಿಸಿ ಮಿಸ್‍ಮ್ಯಾಚ್ 5313 ಪ್ರಕರಣಗಳು ಬಾಕಿ ಇವೆ. ಇದರಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಸುಮಾರು 2000 ಜಟಿಲ ಪ್ರಕರಣಗಳಿವೆ ಎಂದು ಡಿಸಿ ಯವರು ತಿಳಿಸಿದ್ದು, ಇನ್ನುಳಿದ ಪ್ರಕರಣಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಸೂಚಿಸಿದ್ದೇನೆ.

RELATED ARTICLES
- Advertisment -
Google search engine

Most Popular