ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿ ಅಲತ್ತೂರು ಗ್ರಾಮದ ಮಂಜು(೩೮) ಎಂದು ತಿಳಿದು ಬಂದಿದ್ದು ಬಸ್ ಹಿಂಬದಿ ಚಕ್ರ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.