ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಂಜೆ ಗಾಳಿ ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಇಂದು ಬೆಳಗ್ಗೆಯಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದೀಗ ಇಂದು ಸಂಜೆ ಭಾರೀ ಗಾಳಿ ಸಹಿತ ಜೋರಾಗಿ ಮಳೆ ಸುರಿದಿದೆ. ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಎಂಬಲ್ಲಿ ಬೃಹತ್ ಗಾತ್ರದ ತೆಂಗಿನ ಮರ ಹೆದ್ದಾರಿ ಮಧ್ಯೆ ಬಿದ್ದಿದೆ. ಜೊತೆಗೆ ವಿದ್ಯುತ್ ಕಂಬ ನೆಲಕ್ಕೆ ಉರುಳಿಬಿದ್ದಿದೆ.
ಹೀಗಾಗಿ ವಾಹನ ಸವಾರರು ಪರದಾಡುವಂತೆ ಆಯ್ತು. ಅಲ್ಲದೇ ಟ್ರಾಫಿಕ್ ಜಾಮ್ ಉಂಟಾಗಿತ್ತು.