ಮಂಗಳೂರು (ದಕ್ಷಿಣ ಕನ್ನಡ) :15 ವರ್ಷಗಳ ಹಿಂದೆ ಅಂದ್ರೆ 2010ರ ಮೇ 22ರಂದು ನಡೆದ ಮಂಗಳೂರು ಭೀಕರ ವಿಮಾನ ದುರಂತಲ್ಲಿ ಜೀವ ಕಳೆದುಕೊಂಡವರಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇಂದು ಮಂಗಳೂರಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬಜ್ಪೆ ವಿಮಾನ ದುರಂತದಲ್ಲಿ ಮಡಿದವರ ಸ್ಮರಣಾರ್ಥ ತಣ್ಣೀರುಬಾವಿ ಬಳಿ ನಿರ್ಮಿಸಲಾಗಿರುವ ಸ್ಮಾರಕದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ದ.ಕ. ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್, ಮಂಗಳೂರು ಮನಪಾ ಆಯುಕ್ತ ರವಿಚಂದ್ರ ನಾಯಕ್, ಪಣಂಬೂರು ಎಸಿಪಿ ಕೆ.ಶ್ರೀಕಾಂತ್, ತಹಶೀಲ್ದಾರ್ ನವೀನ್ ಕುಮಾರ್ ಉಪಸ್ಥಿತರಿದ್ದು, ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ದ.ಕ. ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್