ಕೃಷ್ಣರಾಜನಗರ: ಕರ್ನಾಟಕ ಪ್ರೆಸ್ ಕ್ಲಬ್ ಕೃಷ್ಣರಾಜನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಅವರನ್ನು ಅವರ ಹುಟ್ಟುಹಬ್ಬದ ಅಂಗವಾಗಿ ಶಾಸಕ ಡಿ.ರವಿಶಂಕರ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಾಹಿತಿ ಬನ್ನೂರು ಕೆ.ರಾಜು, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕಂಠಿಕುಮಾರ್, ನಿವೃತ್ತ ಶಿಕ್ಷಕ ಸಿದ್ದರಾಮೇಗೌಡ, ಮೈಸೂರು ಧ್ವನಿ ದಿನಪತ್ರಿಕೆಯ ಸಂಪಾದಕ ಕೆ.ಎನ್.ತುಳಸಿ ಕುಮಾರ್, ಮುಖಂಡ ವೀರಭದ್ರ ಇದ್ದರು.