ಮೈಸೂರು: ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ ಸಂತೆಪೇಟೆಯಲ್ಲಿ 50 ವರ್ಷದಿಂದ ಪತ್ರಿಕೆ ವಿತರಣೆ ಮಾಡುತ್ತಿರುವ ರಮಾದೇವಿ ರವರಿಗೆ ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಜನಸಾಮಾನ್ಯರಿಗೆ ಬೆಳಗ್ಗೆ ಏಳುತ್ತಲೇ ಪತ್ರಿಕೆ ಓದುವ ಹವ್ಯಾಸ ಇರುವುದು ಸಹಜ. ಅದನ್ನು ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ಬಹುಮುಖ್ಯವಾಗಿದೆ.
ಬೇಸಿಗೆ, ಚಳಿ, ಮಳೆ ಎನ್ನದೆ ಪ್ರತಿನಿತ್ಯ ಬೆಳಗ್ಗೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸವ ಕಾರ್ಯ ಮಾಡುತ್ತಾರೆ. ಜಗತ್ತು ಎಷ್ಟೇ ಆಧುನಿಕತೆಯಲ್ಲಿ ಬೆಳೆದರೂ ಪತ್ರಿಕೆಗಳನ್ನು ಓದುವುದನ್ನು ಮಾತ್ರ ಯಾರೂ ಬಿಡುವುದಿಲ್ಲ. ಈ ನಿಟ್ಟಿನಲ್ಲಿ ಪತ್ರಿಕಾ ವಿತರಕರನ್ನು ಸಮಾಜದಲ್ಲಿ ಗೌರವದಿಂದ ಕಾಣಬೇಕು. ಸಾಮಾನ್ಯವಾಗಿ ಜನರು ಪತ್ರಿಕಾ ವಿತರಕರನ್ನು ಕೀಳು ಮಟ್ಟದಲ್ಲಿ ನೋಡುತ್ತಾರೆ. ಅದು ಬದಲಾವಣೆಯಾಗಬೇಕು. ಯಾವುದೇ ಕ್ಷೇತ್ರದಲ್ಲಾದರೂ ತಮ್ಮ ಕೆಲಸಕ್ಕೆ ತಕ್ಕಂತೆ ಗೌರವ ಇರುತ್ತದೆ. ಅದೇ ರೀತಿ ಪತ್ರಿಕಾ ವಿತರಕರನ್ನೂ ಕೂಡ ಗೌರವಿಸುವಂತಾಗಬೇಕು ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಿಕಾ ವಿತರಕರಾದ ರಮಾದೇವಿ ಮಾತನಾಡಿ, ಮಳೆ ಚಳಿ ಎನ್ನದೆ ವರ್ಷವಿಡಿ ಕೆಲಸ ಮಾಡಬೇಕು, ನಮಗೆ ರಜೆಯೂ ಇಲ್ಲ, ಇಷ್ಟಾದರೂ ಸಾಮಾಜಿಕ ಭದ್ರತೆ ಇಲ್ಲಸಾಮಾಜಿಕ ಭದ್ರತೆ ಇಲ್ಲ, ಪತ್ರಿಕ ವಿತರಕರನ್ನು ಅಸಂಘಟಿತ ಕಾರ್ಮಿಕರೆಂದು ಗುರುತಿಸಿ ಸಾಮಾಜಿಕ ಭದ್ರತೆ ಕೊಡಬೇಕು, ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು
ಇದೇ ಸಂದರ್ಭದಲ್ಲಿ ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ರಾಕೇಶ್, ಅಶ್ವಿನಿ ಗೌಡ, ಪಾಂಡು, ಹಾಗೂ ಇನ್ನಿತರರು ಹಾಜರಿದ್ದರು.