ಶ್ರೀರಂಗಪಟ್ಟಣ: ಬಡ ಮಕ್ಕಳು ಉನ್ನತ ಶಿಕ್ಷಣ ಪಡೆಗಾಗಲೇ ಶಿಕ್ಷಣಕ್ಕೆ ಬೆಲೆ ಎಂದು ಬೆಂಗಳೂರಿನ ಉದ್ಯಮಿ ಮದನ್ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಗಾಮನಹಳ್ಳಿ ಗ್ರಾಮದಲ್ಲಿರುವ ಜ್ಞಾನಭಾರತಿ ಪ್ರೌಢಶಾಲೆಯಲ್ಲಿ ೨೦೨೨-೨೦೨೩ ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಕುಗ್ರಾಮದ ಬಡ ಕುಟುಂಬದ ಮಕ್ಕಳು, ಉನ್ನತ ಶಿಕ್ಷಣ ಪಡೆದಾಗಲೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇಂತಹ ಮಕ್ಕಳೇ “ಬೆಂಕಿಯಲ್ಲಿ ಅರಳಿದ ಹೂ”ಗಳಂತೆ ಮಕ್ಕಳ ಶಿಕ್ಷಣದ ಹಕ್ಕು ನಿಜವಾಗಿ ದೊರೆತಂತಾಗುತ್ತದೆ ಎಂದು ನುಡಿದರು.
ಗ್ರಾಮೀಣ ವ್ಯಾಪ್ತಿಯಲ್ಲಿರುವ ಜ್ಞಾನ ಭಾರತಿ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ. ೧೦೦ರಷ್ಟು ಫಲಿತಾಂಶಕ್ಕೆ ಕಾರಣರಾದ ೧೦ ವಿದ್ಯಾರ್ಥಿಗಳಿಗೆ ಅವರ ಮುಂದಿನ ಶಿಕ್ಷಣಕ್ಕೆ ಆರ್ಥಿಕ ಸಹಾಯ ಧನ ನೀಡುವ ಮೂಲಕ ಆ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದೇನೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತಂದೆ ತಾಯಿಯಿಲ್ಲದ ಎರಡು ಹೆಣ್ಣು ಮಕ್ಕಳ ವಿದ್ಯಾಭ್ಯಾಸದ ಪೂರ್ಣ ಖರ್ಚಿನ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಸನ್ಮಾನಿಸಿ ಗೌರವಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದಲ್ಲಿರುವ ಜ್ಞಾನಭಾರತಿ ಪ್ರೌಢಶಾಲೆಯಲ್ಲಿ ೨೦೨೨-೨೦೨೩ ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಂಗಳೂರಿನ ಉದ್ಯಮಿ ಮದನ್ ಗೌರವ ಸಲ್ಲಿಸಿದರು.