ಮಂಡ್ಯ: ಒಂದೇ ಮನೆಯ14 ಕುರಿಗಳನ್ನ ಕಳ್ಳರು ಹೊತ್ತೊಯ್ದಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತ ಮಂಜೇಗೌಡ ಎಂಬುವರಿಗೆ ಸೇರಿದ 14 ಕುರಿಗಳನ್ನು ಕಳ್ಳತನ ಮಾಡಲಾಗಿದ್ದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ತಡರಾತ್ರಿ ಕುರಿ ಕಟ್ಟುವ ಶೆಡ್ ಬಾಗಿಲು ತೆರದು ಕುರಿಗಳನ್ನು ಕಳ್ಳರು ಹೊತ್ತೊಯ್ದಿದ್ದಾರೆ.
ಕುರಿ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ
ಕಿಕ್ಕೇರಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.