ಹೈದರಾಬಾದ್: ಬೆಳ್ಳಂಬೆಳಗ್ಗೆ ತೆಲಂಗಾಣದ ಹನುಮಕೊಂಡದಲ್ಲಿ ಟ್ರಕ್ ಹಾಗೂ ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಿಲ್ಲೆಯ ಎಲ್ಕತುರ್ಥಿ ಮಂಡಲದಲ್ಲಿ ಈ ಘಟನೆ ನಡೆದಿದ್ದು, ಎದುರುಗಡೆಯಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಇತರ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರು 16 ರಿಂದ 72 ವರ್ಷ ವಯಸ್ಸಿನವರು ಎನ್ನಲಾಗಿದ್ದು ಅವರ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ. ಕಾರಿನಲ್ಲಿದ್ದವರು ಎಟುರ್‌ನಗರಂ ಮೂಲದವರು ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.