ಮುಂಬಯಿ: ವೇಗವಾಗಿ ಬಂದ ಕಾರ್ಗೋ ಟ್ರಕ್, ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಮಹಾರಾಷ್ಟ್ರದ ಅಹ್ಮದ್ ನಗರದ ನಾಸಿಕ್-ಪುಣೆ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಓಜಸ್ವಿ ಧನಕರ್ (2), ಆಶಾ ಸುನಿಲ್ ಧನಕರ್ (42), ಸುನಿಲ್ ಧನಕರ್ (65), ಮತ್ತು ಅಭಯ್ ಸುರೇಶ್ ವಿಶಾಲ್ (48) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ ಓರ್ವ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರ ಮಾಹಿತಿ ಪ್ರಕಾರ ವೇಗವಾಗಿ ಬಂದ ಕಾರ್ಗೋ ಟ್ರಕ್ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಕಾರಿನ ಮೇಲೆ ಉರುಳಿ ಬಿದ್ದಿದೆ. ಈ ವೇಳೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೆ ಓರ್ವ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಿದ್ದಾರೆ.
ಘಟನೆ ನಡೆದ ಕೂಡಲೇ ಪೊಲೀಸರು, ಸ್ಥಳೀಯರು ರಕ್ಷಣೆಗೆ ಧಾವಿಸಿ ಕಾರಿನೊಳಗೆ ಸಿಲುಕಿದ್ದವರನ್ನು ಹೊರ ತೆಗೆಯಲು ಹರಸಾಹಸಪಟ್ಟಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.