Friday, April 11, 2025
Google search engine

Homeರಾಜಕೀಯಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ: ಬಿ.ವೈ ವಿಜಯೇಂದ್ರ

ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ: ಬಿ.ವೈ ವಿಜಯೇಂದ್ರ

ಬೆಂಗಳೂರು: ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನೀಯ. ಪೂಂಜಾ ಭಾಷಣ ನೋಡಿದ್ದೇನೆ, ಅವರ ಜತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಪದೇ ಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲಾಗದು ಎಂದಿದ್ದಾರೆ.

ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ. ಅದು ಸರಿ ಅಲ್ಲ ಎಂಬುದು ಪೂಂಜಾರಿಗೂ ಕೂಡ ಗೊತ್ತಾಗಿದೆ. ಹಾಗೆಂದು ಪದೇಪದೆ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗಲ್ಲ. ಶಾಸಕರನ್ನು ಅರೆಸ್ಟ್ ಮಾಡುವ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ, ಇಲಾಖೆ ಹೊಣೆ ಆಗಬೇಕಾಗುತ್ತದೆ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ. ಶಶಿರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರ ಬಂಧನಕ್ಕೆ ಮುಂದಾಗುವುದನ್ನು ಕೈ ಬಿಡಬೇಕು. ಗೃಹ ಸಚಿವರು ಎಸ್​​ಪಿ ಜತೆ ಮಾತನಾಡಿ ಸೂಚನೆ ಕೊಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಹರೀಶ್ ಪೂಂಜಾರನ್ನು ಬಂಧಿಸಲು ಪೊಲೀಸರು ಬೆಳ್ತಂಗಡಿಯ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ವಾಗ್ವಾದವೂ ನಡೆದಿದೆ.

ಈ ಮಧ್ಯೆ, ಬೆಳ್ತಂಗಡಿಯತ್ತ ಬಿಜೆಪಿ ನಾಯಕರು ದೌಡಾಯಿಸಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಗಣೇಶ್ ಕಾರ್ಣಿಕ್ ಹಾಗೂ ಇತರರು ಪೂಂಜಾ ನಿವಾಸದತ್ತ ದೌಡಾಯಿಸಿದ್ದಾರೆ. ಪೂಂಜಾ ನಿವಾಸಕ್ಕೆ ವಕೀಲರಾದ ಶಂಭು ಶರ್ಮ, ಅಜಯ್ ಸುವರ್ಣ ಕೂಡ ಆಗಮಿಸಿದ್ದು, ಸಮಾಲೋಚನೆ ನಡೆಸುತ್ತಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ದರ್ಪ ಪ್ರದರ್ಶಿಸಿದ ಆರೋಪದಡಿ ಎಫ್ಐಆರ್ ದಾಖಲಾಗಿತ್ತು. ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರನ್ನು ತಡೆದ ಆರೋಪದ ಮೇಲೆ ಮಂಗಳವಾರ ಮತ್ತೊಂದು ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಶಾಸಕರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

RELATED ARTICLES
- Advertisment -
Google search engine

Most Popular