Saturday, April 19, 2025
Google search engine

Homeರಾಜ್ಯಸುದ್ದಿಜಾಲಕಾಂಗ್ರೆಸ್ ಸರಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ: ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪ

ಕಾಂಗ್ರೆಸ್ ಸರಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ: ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪ

ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಕಾಂಗ್ರೆಸ್ ಸರಕಾರದಿಂದ ತುಘಲಕ್ ದರ್ಬಾರ್ ನಡೆಯುತ್ತಿದೆ ಎಂದು ಕರ್ನಾಟಕ ವಸ್ತು ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ ಆರೋಪಿಸಿದರು. ಕೆ.ಆರ್.ನಗರ ಪಟ್ಟಣದಲ್ಲಿ ಇಂದು ೯ ನೇ ವಾರ್ಡ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮನೆ ಮನೆಗೆ, ಪಾರ್ಕ್ ಗಳಲ್ಲಿ ಬಿಜೆಪಿ ಪಕ್ಷದ ಮುಖಂಡರೊಟ್ಟಿಗೆ ಮತಯಾಚನೆ ಮಾಡಿದರು.

ಜನರು ಬದುಕಿನ ಬಗ್ಗೆ ಗ್ಯಾರಂಟಿ ಕಳೆದುಕೊಂಡಿದ್ದಾರೆ. ಈ ಸರಕಾರದಲ್ಲಿ ಶಾಂತಿ, ನೀರು, ಮಹಿಳೆಯರ ಮಾನಪ್ರಾಣ, ರೈತರ ಬದುಕು, ಭಾವನೆ ಯಾವುದಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ. ಗಲಭೆಕೋರರು, ಭಯೋತ್ಪಾದಕರಿಗೆ ರಕ್ಷಣೆಯ ಗ್ಯಾರಂಟಿ ಸಿಗುತ್ತಿದೆ. ವಿದ್ಯುತ್ ದರ ಏರಿಕೆಯ ಗ್ಯಾರಂಟಿ, ವಿವಿಧ ತೆರಿಗೆ ಹೆಚ್ಚಳದ ಗ್ಯಾರಂಟಿ ನೀಡುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ಮತಾಂಧ ಶಕ್ತಿ ಬೆಳೆಸುವುದನ್ನೇ ಆಡಳಿತದ ಭಾಗವಾಗಿ ಸಿದ್ದರಾಮಯ್ಯ ಸರಕಾರ ಮಾಡಿಕೊಂಡಂ ತಿದೆ. ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕವನ್ನು ಒಂದೇ ವರ್ಷದಲ್ಲಿ ಮತಾಂಧರ ಯುದ್ಧಭೂಮಿಯಾಗಿ ಪರಿವರ್ತಿಸಿದೆ ಆಕ್ರೋಶ ವ್ಯಕ್ತಪಡಿಸಿದರು
ಬಳಿಕ ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಹೊಸಹಳ್ಳಿ ವೆಂಕಟೇಶ್ ಮಾತನಾಡಿ ಸಿದ್ದರಾಮಯ್ಯ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಗಳನ್ನು ಕಳೆದುಕೊಂಡಿದ್ದಾರೆ. ಹುಬ್ಬಳ್ಳಿಯ ನೇಹಾ ಹಿರೇಮಠ ಅಮಾನುಷ ಹತ್ಯೆ ಆಗಿದೆ. ತನ್ನದೇ ಪಕ್ಷದ ಚುನಾಯಿತ ಪ್ರತಿನಿಧಿಯ ಮಗಳ ಹತ್ಯೆಗೆ ನ್ಯಾಯ ಒದಗಿಸುವುದು ಬಿಟ್ಟು ಆರೋಪಿಗೆ ರಕ್ಷಣೆ ಭಾಗ್ಯ ಒದಗಿಸಿದ ಸರಕಾರ ಎಂದು ಕಿಡಿ ಕಾರಿದರು.

ಮೊನ್ನೆ ಕೆ.ಆರ್.ನಗರಕ್ಕೆ ಪ್ರಚಾರಕ್ಕೆ ಬಂದಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಬ್ಬ ಒಕ್ಕಲಿಗ ನಾಯಕ ಮಾಜಿ ಪ್ರಧಾನಿ ಬಗ್ಗೆ ಏಕವಚನ ದ್ವನಿಯಲ್ಲಿ ಮಾತನಾಡುವ ನೈತಿಕತೆ ಇಬ್ಬರಿಗೂ ಇಲ್ಲ, ಯಾವುದೇ ಕಾರಣಕ್ಕೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗ ನಾಯಕರಾಗಲು ಸಾದ್ಯವಿಲ್ಲ, ಕಳೆದ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀವು ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಜ್ಯದಲ್ಲಿ ಒಕ್ಕಲಿಗ ಜನಾಂಗ ಹೆಚ್ಚು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟಿತ್ತು ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇರುವವರೆಗೂ ಮುಖ್ಯಮಂತ್ರಿ ಆಗುವುದಿಲ್ಲ, ಅದು ಸಾದ್ಯ ಕೂಡ ಆಗಲ್ಲ ಎಂದು ಭವಿಷ್ಯ ನುಡಿದ ಅವರು ಯಾವತ್ತು ನಮ್ಮ ಒಕ್ಕಲಿಗ ಜನಾಂಗಕ್ಕೆ ಮಾಜಿ ದೇವೇಗೌಡರು, ,ಕುಮಾರಣ್ಣ ಅವರೇ ನಾಯಕರು ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಎಚ್ ಡಿ ಪ್ರಭಾಕರ್ ಜೈನ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಕೆ ಎಸ್ ಉಮಾ ಶಂಕರ್, ಹೊಸೂರು ಅನಿಲ್, ಸಾಲಿಗ್ರಾಮ ನಟರಾಜ್, ಅರಕೆರೆ ಮಧು, ದೊರೆಸ್ವಾಮಿ , ಕೆ.ಆರ್ ಮಂಜು, ಶಿವರಾಜ್ ಮೊದಲಾದವರು ಇದ್ದರು.

RELATED ARTICLES
- Advertisment -
Google search engine

Most Popular