Monday, April 21, 2025
Google search engine

Homeರಾಜ್ಯತುಮಕೂರು: ಶಾಲಾ ಮಕ್ಕಳ ಮೇಲೆ ಜೇನು ನೊಣಗಳ ದಾಳಿ: 16 ವಿದ್ಯಾರ್ಥಿಗಳಿಗೆ ಗಾಯ

ತುಮಕೂರು: ಶಾಲಾ ಮಕ್ಕಳ ಮೇಲೆ ಜೇನು ನೊಣಗಳ ದಾಳಿ: 16 ವಿದ್ಯಾರ್ಥಿಗಳಿಗೆ ಗಾಯ

ತುಮಕೂರು: ಶಾಲೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ನೊಣಗಳು ದಾಳಿ ಮಾಡಿದ್ದು, 16 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ.

ಶಾಲೆಯ ಪಕ್ಕದಲ್ಲಿರುವ ತೋಟದಲ್ಲಿ ಜೇನು ಗೂಡು ಕಟ್ಟಿತ್ತು. ಇಂದು ಬೆಳಿಗ್ಗೆ ಶಾಲೆ ಆರಂಭಕ್ಕೂ ಮೊದಲು ಆವರಣದಲ್ಲಿ ಮಕ್ಕಳು ಆಟವಾಡುತ್ತಿದ್ದರು.  ಈ ವೇಳೆ ಜೇನು ನೋಣಗಳು  ಏಕಾಏಕಿ ದಾಳಿ ನಡೆಸಿದ್ದು, 20ಕ್ಕೂ ಹೆಚ್ಚು ಮಕ್ಕಳಿಗೆ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯವಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳನ್ನು  ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಶಿರಾ ತಹಶೀಲ್ದಾರ್ ದತ್ತಾತ್ರೇಯ, ಡಿವೈಎಸ್ಪಿ ಶೇಖರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆಸ್ಪತ್ರೆಗೂ ಭೇಟಿ ನೀಡಿ ಮಕ್ಕಳ ಆರೋಗ್ಯವನ್ನು ಅಧಿಕಾರಿಗಳು ವಿಚಾರಿಸಿದ್ದಾರೆ.

RELATED ARTICLES
- Advertisment -
Google search engine

Most Popular