Friday, April 11, 2025
Google search engine

Homeಅಪರಾಧತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆಗೆ ಶರಣು

ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.

ತ್ರಿಶಾಲ್‌ ತನ್ನ ತಾಯಿ ಶಂಕುತಲಾ ಜೊತೆ ವಿಜಯನಗರದ 2 ನೇ ಮುಖ್ಯ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. ಸರ್ವೋದಯ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತ್ರಿಶಾಲ್ (13) ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಡೆತ್ ನೋಟ್ ಇದೆ ಎನ್ನಲಾಗಿದ್ದು ಬಹಿರಂಗಗೊಂಡಿಲ್ಲ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಕಾರ್ಯಕರ್ತೆಯಾಗಿರುವ ಶಕುಂತಲಾ ನಟರಾಜ್ ಅವರು ಸದಾ ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿದ್ದಾರೆ. ಇತ್ತೀಚೆಗೆ ಸಿಎಂ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಟೀಕಿಸಿ ಬಂಧನಕ್ಕೊಳಗಾಗಿದ್ದರು.

RELATED ARTICLES
- Advertisment -
Google search engine

Most Popular