ತುಮಕೂರು: ಕರ್ನಾಟಕ ಬಂದ್ ಗೆ ತುಮಕೂರಿನ 20ಕ್ಕೂ ಹೆಚ್ಚು ಸಂಘಟನೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.
ರೈತಪರ, ದಲಿತಪರ ಸಂಘಟನೆಗಳು ಸೇರಿ 20ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತುಮಕೂರು ಸಂಪೂರ್ಣ ಬಂದ್ ಆಗಲಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ವಸ್ತುಗಳು ಅಲಭ್ಯವಾಗಲಿದೆ.
ಸಂಘಟನೆಗಳ ಕಾರ್ಯಕರ್ತರು ನಾಳೆ ಬೆಳಗ್ಗೆ 11 ಗಂಟೆಗೆ ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದ್ದು, ಬೈಕ್ ರ್ಯಾಲಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಶ್ರೀ ಸಿದ್ಧಲಿಂಗ ಸ್ವಾಮೀಜಿ ಬೆಂಬಲ

ಕರ್ನಾಟಕ ಬಂದ್ ಗೆ ಸಿದ್ಧಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದು, ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಸ್ವಾಮೀಜಿ ಒಪ್ಪಿಗೆ ಸೂಚಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಅನೇಕ ಸ್ವಾಮೀಜಿಗಳು ಬಂದ್ ಗೆ ಬೆಂಬಲ ಸೂಚಿಸಿದ್ದು, ಅಂತೆಯೇ ಸಿದ್ಧಗಂಗಾ ಮಠದ ಸ್ವಾಮೀಜಿ ಕೂಡ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕುಂಚಿಟಿಗರ ಮಠದ ಹನುಮಂತನಾಥ ಸ್ವಾಮೀಜಿ ಸೇರಿ ವಿವಿಧ ಮಠದ ಸ್ವಾಮೀಜಿಗಳು ಬಂದ್ ಗೆ ಬೆಂಬಲ. ವ್ಯಕ್ತಪಡಿಸಿದ ಬಗ್ಗೆ ಸಂಘಟನೆಗಳ ಮುಖಂಡರು ಮಾಹಿತಿ ನೀಡಿದ್ದಾರೆ.