ತುಮಕೂರು: ಕೆರೆಗೆ ಬಿದ್ದು ನವ ವಿವಾಹಿತೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಶಿಡ್ಲನಹಟ್ಟಿ ಗ್ರಾಮದಲ್ಲಿ ನಡೆದಿದೆ.
ರಕ್ಷಿತ (19) ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ.
ಕಳೆದ ಇಪ್ಪತ್ತು ದಿನಗಳ ಹಿಂದೆ ಸೋದರ ಮಾವನೊಂದಿಗೆ ರಕ್ಷಿತಾಳಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಅನಾರೋಗ್ಯ ಕಾರಣದಿಂದ ಖಿನ್ನತೆಗೆ ಒಳಗಾಗಿದ್ದಳು.
ಘಟನೆ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಮೃತೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.