ತುಮಕೂರು: ತುಮಕೂರು ಜಿಲ್ಲೆಯಲ್ಲಿ ಯಾವುದೇ ಜೆ.ಎನ್ 1 ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ವೀಣಾ ಸ್ಪಷ್ಟನೆ ನೀಡಿದ್ದಾರೆ. ಎರಡು ಪ್ರಕರಣದಲ್ಲಿ ಜೀನ್ ಟೆಸ್ಟಿಂಗ್‌ಗೆ ಕಳುಹಿಸಲಾಗಿದೆ. ತುಮಕೂರು ಜಿಲ್ಲೆಯ ಜನತೆ ಆತಂಕ ಪಡುವ ಅವಶ್ಯಕತೆ ಇಲ್ಲ. ಸರ್ಕಾರದ ನಿರ್ದೇಶನದಂತೆ ಶಬರಿಮಲೆಗೆ ಹೋಗಿ ವಾಪಸ್ ಆದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 500 ಬೆಡ್‌ಗಳನ್ನು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ಬೆಡ್‌ಗಳಿಗೂ ಆಕ್ಸಿಜನ್ ಯುನಿಟ್ ಹಾಕಲಾಗಿದೆ. 60 ಐಸಿಯು ಬೆಡ್ ಮೀಸಲಿಡಲಾಗಿದೆ. ಜೆಎನ್.1 ಎದುರಿಸಲು ಜಿಲ್ಲಾಸ್ಪತ್ರೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದರು.