ತುಮಕೂರು: ಅನಾವಶ್ಯಕ ವೆಚ್ಚ ಕಡಿಮೆ ಮಾಡಲು ತುಮಕೂರು ಜಿಲ್ಲಾಡಳಿತ ಹೊಸ ಪ್ಲಾನ್ ಮಾಡಿದ್ದು, ಅಧಿಕಾರಿಗಳು ಐಶಾರಾಮಿ ಕಾರುಗಳನ್ನ ಬಿಟ್ಟು ಕೆಎಸ್ ಆರ್ ಟಿಸಿ ಬಸ್ ಏರಿದ್ದಾರೆ.
ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ನಡೆಯುತ್ತಿರುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಸಿ.ಇ.ಒ ಪ್ರಭು ಸೇರಿದಂತೆ ಎಲ್ಲಾ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬಂದಿದ್ದಾರೆ.
ಕೆಎಸ್ ಆರ್ ಟಿಸಿ ಅಧಿಕಾರಿಗಳು ಅಧಿಕಾರಿಗಳಿಗಾಗಿ ಹೊಸ ಬಸ್ ಅನ್ನೇ ನೀಡಿದ್ದಾರೆ.