ತುಮಕೂರು: ವಧು-ವರರಿಂದ ಮದುವೆ ಮಂಟಪದಲ್ಲೇ ಇಂಡೋ – ಕಿವೀಸ್ ಸೆಮಿ ಫೈನಲ್ ಪಂದ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಿರುವ ಅಪರೂಪದ ಘಟನೆ ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ಎಸ್ ಎಸ್ ಕೆ ಕಲ್ಯಾಣ ಮಂಟಪದಲ್ಲಿ ನಡೆದಿದೆ.
ಪಾವಗಡದ ಎಸ್ಎಸ್ ಕೆ ಕಲ್ಯಾಣ ಮಂಟಪದಲ್ಲಿ ಕ್ರಿಕೆಟ್ ಪ್ರೇಮಿಗಳಾದ ಸೌಂದರ್ಯ, ಕಾರ್ತಿಕ್ ಮದುವೆಯ ಆರತಕ್ಷತೆ ನಡೆಯುತ್ತಿತ್ತು.
ಈ ವೇಳೆ ಆರತಕ್ಷತೆಗೆ ಬರುವ ಸಂಬಂಧಿಕರು, ಸ್ನೇಹಿತರಿಗಾಗಿ ಎಲ್ ಇಡಿ ಮೂಲಕ ಪಂದ್ಯ ವೀಕ್ಷಣೆಗೆ ಅವಕಾಶ ಮಾಡಲಾಗಿತ್ತು.
ಆರ್ಕೇಸ್ಟ್ರಾ ಜೊತೆ ಮ್ಯಾಚ್ ನೋಡಲು ಎಲ್ ಇಡಿ ವ್ಯವಸ್ಥೆ ಮಾಡಲಾಗಿತ್ತು. ಟೀಂ ಇಂಡಿಯಾ ಗೆಲ್ಲುತ್ತಿದ್ದಂತೆ ಮದುವೆ ಮಂಟಪದಲ್ಲಿ ಸಂಭ್ರಮಾಚರಣೆ ಮನೆ ಮಾಡಿತ್ತು.