ಮಾದಕ ವಸ್ತುವಾದ ಗಾಂಜಾವನ್ನು ಬಿಹಾರ ರಾಜ್ಯದಿಂದ ರೈಲು ಮೂಲಕ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸಿದ ಅಂತಾರಾಜ್ಯ ಆರೋಪಿತರನ್ನು ಮಂಗಳೂರಿನ ಬಜಪೆ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 03-01-2026 ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 Kg ತೂಕದ ಮಾದಕವಸ್ತು ಗಾಂಜಾವನ್ನು ವಶದಲ್ಲಿರಿಸಿಕೊಂಡು ಅಕ್ರಮವಾಗಿ ಮಾರಾಟ ಮಾಡಲೆತ್ನಿಸಿದ ಬಿಹಾರದ ಸುನೀಲ್ ಕುಮಾರ್, ಬ್ರಿಜೇಶ್ ಶ್ರೀವಾಸ್ತವ ಎಂಬವರನ್ನು ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿ ಆರೋಪಿತರಿಂದ ಸುಮಾರು 1 ಕೆಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆರೋಪಿತರನ್ನು ವಿಚಾರಣೆ ನಡೆಸಿದಾಗ ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಲ್ಲಿ ಖರೀದಿಸಿ ರೈಲಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಬಜಪೆ ಪೊಲೀಸರು ಮೊ.ನಂ 08-2026 ಕಲಂ (c), 20(b)(ii)(a) NDPS Act ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



