ಹುಬ್ಬಳ್ಳಿ : ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ವಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಹುಬ್ಬಳ್ಳಿ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತ ಬೈಕ್ ಸವಾರರನ್ನು ಆನಂದ್ (೩೪) ಹಾಗೂ ಈರಣ್ಣ ಬಡಿಗೇರ(೩೬) ಎಂದು ಗುರುತಿಸಲಾಗಿದ್ದು, ಮೃತರು ಕಲಘಟಗಿ ತಾಲೂಕಿನ ಆಸ್ತಕಟ್ಟಿ ನಿವಾಸಿಗಳು. ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ದಕ್ಷಿಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.