Friday, April 18, 2025
Google search engine

Homeಅಪರಾಧಉತ್ತರ ಪ್ರದೇಶದಲ್ಲಿ ರೈಲು ಹಳಿ ತಪ್ಪಿ ಇಬ್ಬರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಉತ್ತರ ಪ್ರದೇಶದಲ್ಲಿ ರೈಲು ಹಳಿ ತಪ್ಪಿ ಇಬ್ಬರು ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

ಗೊಂಡಾ : ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ದಿಬ್ರುಗಢ ಎಕ್ಸ್‌ಪ್ರೆಸ್‌ನ ಸುಮಾರು ೧೨ ಬೋಗಿಗಳು ಹಳಿತಪ್ಪಿವೆ. ಈ ರೈಲು ಚಂಡೀಗಢದಿಂದ ಗೋರಖ್‌ಪುರಕ್ಕೆ ಹೋಗುತ್ತಿರುವಾಗ ಈ ಅವಘಡ ಸಂಭವಿಸಿದೆ. ಗೊಂಡಾ ಜಿಲ್ಲೆಯ ಜಿಲಾಹಿ ಮತ್ತು ಮೋತಿಗಂಜ್ ರೈಲು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ.

ಪ್ರಸ್ತುತ, ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ. ಹಲವು ಪ್ರಯಾಣಿಕರು ಸಿಲುಕಿದ್ದು, ಈ ಪೈಕಿ ಇಬ್ಬರು ಸಾವನ್ನಪ್ಪಿದ್ದು, ೨೫ ಜನರಿಗೆ ಗಾಯಾಳುಗಳಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಂದ್ಹಾಗೆ, ರೈಲ್ವೆ ಇಲಾಖೆಯ ಎಲ್ಲ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸುತ್ತಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

RELATED ARTICLES
- Advertisment -
Google search engine

Most Popular