Monday, April 21, 2025
Google search engine

Homeರಾಜ್ಯಜೂನ್ ತಿಂಗಳ ಗೃಹಲಕ್ಷ್ಮಿ ಹಣ ಇಂದು ಅಥವಾ ನಾಳೆ ಖಾತೆಗೆ ಜಮಾ : ಲಕ್ಷ್ಮೀ...

ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಇಂದು ಅಥವಾ ನಾಳೆ ಖಾತೆಗೆ ಜಮಾ : ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಇಂದು, ಅಥವಾ ನಾಳೆ ಯಜಮಾನಿಯರ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.

ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಹಿಳೆಯರು ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೇ, ಜೂನ್ ತಿಂಗಳ ಹಣ ಹಾಕಿದ್ದೇವೆ. ಇಂದು ಅಥವಾ ನಾಳೆ ಯಜಮಾನಿಯರ ಖಾತೆಗೆ ಹಣ ಕ್ರೆಡಿಟ್ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ನಿಲ್ಲುವುದಿಲ್ಲ. ಐದು ವರ್ಷಗಳ ವರೆಗೂ ಗೃಹಲಕ್ಷ್ಮಿ ಯೋಜನೆ ಇರಲಿದೆ. ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಇಲಾಖೆಯಿಂದ ಗೃಹಲಕ್ಷ್ಮಿ ಹಣ ಖಾತೆಗೆ ಹಾಕುವ ಕೆಲಸ ನಡೆಯುತ್ತಿದ್ದು, ಇಂದು ಅಥವಾ ನಾಳೆ ಖಾತೆಗೆ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.

ಹಣ ಬಾರದಿದ್ದರೆ ಯಜಮಾನಿಯರು ತಪ್ಪದೇ ಈ ಕೆಲಸ ಮಾಡಿ ಗೃಹಲಕ್ಷ್ಮಿ ಹಣ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಒಟ್ಟಿಗೆ ಹಣ ಜಮಾ ಆಗಲಿದೆ. ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್ ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ ೧೧ ನೇ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

ಇನ್ನೂ ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದರು ಕೂಡ ಆಧಾರ ಸೀಡಿಂಗ್ ಮಾಡಿಕೊಂಡಿಲ್ಲ. ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳಬೇಕು. ಬಳಿಕ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ, ಇ-ಕೆವೈಸಿ ಅಪ್‌ಡೇಟ್ ಮಾಡಿಸಿ, ದೃಢೀಕರಣ ಪಡೆದು ಅವುಗಳನ್ನು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿ ಕೇಂದ್ರಗಳ ಕಾರ್ಯಕರ್ತೆಯರಿಗೆ ಒದಗಿಸಿದರೆ, ಸಹಾಯಧನ ಪಾವತಿಸಲು ಕ್ರಮವಹಿಸಲಾಗುವುದು ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular