ಬೆಂಗಳೂರು: ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಕುರಿತ ಇನ್ನೂ ಎರಡು ಆಡಿಯೋ ಗಳು ಇವೆ. ಅವುಗಳನ್ನ ನಾಳೆ ಬಿಡುಗಡೆ ಮಾಡುತ್ತೇನೆ ಎಂದು ಗುತ್ತಿಗೆದಾರ ಚಲುವರಾಜು ತಿಳಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗುತ್ತಿಗೆದಾರ ಚಲುವರಾಜು, ಹನುಮಂತರಾಯಪ್ಪ ಜತೆ ಮಾತಾಡಿದ ಆಡಿಯೋ ಹಾಗೂ 30 ಪರ್ಸೆಂಟ್ ಕಮಿಷನ್ ವಿಚಾರದ ಆಡಿಯೋ ಇದೆ. ಇವುಗಳನ್ನ ನಾಳೆ ಬಿಡುಗಡೆ ಮಾಡುತ್ತೇನೆ ಎಂದು ತಿಳಿಸಿದರು.
ನನಗೆ ಶಾಸಕ ಮುನಿರತ್ನರಿಂದ ಜೀವಭಯವಿದೆ. ನನಗೆ ಭದ್ರತೆ ಬೇಕಿದೆ ಎಂದು ಚಲುವರಾಜು ತಿಳಿಸಿದ್ದಾರೆ.