ಮಂಡ್ಯ: ಟೌನ್ ಮುನ್ಸಿಪಲ್ ಕೌನ್ಸಿಲ್ ನ ಚೀಫ್ ಆಫಿಸರ್ ರಾಣಿ, ರೆವ್ಯೂನ್ಯೂ ಆಫಿಸರ್ ಗಿರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಡ್ಯ ಮೂಲದ ಪ್ರಶಾಂತ್ ಎಂಬುವವರಿಗೆ ಪೌತಿ ಖಾತೆ ಮಾಡಿಕೊಡಲು ಎರಡು ಲಕ್ಷಕ್ಕೆ ಬೇಡಿಕೆ ಇಡಲಾಗಿತ್ತು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿರುವ ಕಚೇರಿಯಲ್ಲಿ ಒಂದು ಲಕ್ಷ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಡ್ಯ ಲೋಕಯುಕ್ತ ಡಿವೈಎಸ್ ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.