Tuesday, April 22, 2025
Google search engine

Homeರಾಜ್ಯಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ಕೊಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಎರಡು ವಿಮಾನಗಳ ಡಿಕ್ಕಿ: ತಪ್ಪಿದ ಭಾರಿ ಅನಾಹುತ

ಕೋಲ್ಕತಾ : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ದರ್ಭಾಂಗಕ್ಕೆ ತೆರಳುತ್ತಿದ್ದ ಟ್ಯಾಕ್ಸಿ ವೇಯಲ್ಲಿದ್ದ ಇಂಡಿಗೋ ವಿಮಾನ, ರನ್‌ವೇ ಪ್ರವೇಶಿಸಲು ಅನುಮತಿಗಾಗಿ ಕಾಯುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ರೆಕ್ಕೆಯ ಒಂದು ಭಾಗ ರನ್‌ವೇ ಮೇಲೆ ಬಿದ್ದಿದ್ದು, ಇಂಡಿಗೋ ವಿಮಾನದ ರೆಕ್ಕೆ ನಜ್ಜುಗುಜ್ಜಾಗಿದೆ. ಇಂಡಿಗೋ ವಿಮಾನದಲ್ಲಿ ನಾಲ್ಕು ಶಿಶುಗಳು ಸೇರಿದಂತೆ ೧೩೫ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ ಇಂಡಿಗೋದ ಪೈಲಟ್‌ಗಳಿಬ್ಬರನ್ನೂ ಅಮಾನತು ಮಾಡಿ ವಿವರವಾದ ತನಿಖೆಗೆ ಆದೇಶಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ನಾವು ಈ ವಿಷಯದ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿದ್ದೇವೆ ಮತ್ತು ಇಂಡಿಗೋ ಏರ್‌ಲೈನ್ಸ್‌ನ ಇಬ್ಬರೂ ಪೈಲಟ್‌ಗಳನ್ನು ಅಮಾನತು ಮಾಡಲಾಗಿದೆ. ತನಿಖೆಯ ಸಮಯದಲ್ಲಿ ಗ್ರೌಂಡ್ ಸ್ಟಾಫ್ ಗಳನ್ನೂ ವಿಚಾರಣೆ ಮಾಡಲಾಗುವುದು. ಎರಡೂ ವಿಮಾನಗಳನ್ನು ವಿವರವಾದ ತಪಾಸಣೆಗಾಗಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ ಎಂದು ಡಿಜಿಸಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular