Monday, April 7, 2025
Google search engine

Homeರಾಜ್ಯಎರಡು ಪ್ರತ್ಯೇಕ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ಸರಕಾರದಿಂದ ತಲಾ 3 ಲಕ್ಷ ರೂ. ಪರಿಹಾರ...

ಎರಡು ಪ್ರತ್ಯೇಕ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ಸರಕಾರದಿಂದ ತಲಾ 3 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಕ್ಕೆರಾಜ್ಯ ಸರಕಾರವು ತಲಾ 3 ಲಕ್ಷ ರೂ. ಪರಿಹಾರ ಘೋಷಿಸಿದೆ.

ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.

ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಆದ್ದರಿಂದ ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮುಖ್ಯಮಂತ್ರಿ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular