Monday, April 21, 2025
Google search engine

Homeಅಪರಾಧಎರಡು ಬಸ್‌ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಎರಡು ಬಸ್‌ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ತುಮಕೂರು: ಬಸ್ ಹತ್ತುವ ವೇಳೆ ಬಸ್ ಹಿಮ್ಮುಖವಾಗಿ ಚಲಿಸಿದ್ದರಿಂದ ಎರಡು ಬಸ್ ಗಳ ನಡುವೆ ಸಿಲುಕಿ ಮಹಿಳೆಯರಿಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತುಮಕೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತಪಟ್ಟವರನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ. ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ ಹಾಗೂ ಪಂಕಜ ಎಂದು ಗುರುತಿಸಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಗ್ರಾಮದ ಆರು ಮಹಿಳೆಯರು ತುಮಕೂರಿನ ಗೊರವನಹಳ್ಳಿ ದೇವಸ್ಥಾನಕ್ಕೆ ಆಗಮಿಸಿದ್ದು, ತುಮಕೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಗೊರವನಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದರು. ಬಸ್ ನಿಲ್ದಾಣಕ್ಕೆ ಬಂದ ಕೂಡಲೇ ಬಸ್ ಹತ್ತಲು ಮುಂದಾದಾಗ ಬಸ್ ಏಕಾಏಕಿ ಹಿಂಬದಿ ಚಲಿಸಿದೆ. ಈ ವೇಳೆ ಹಿಂದುಗಡೆ ಬಸ್ಸೊಂದು ನಿಂತಿತ್ತು. ಈ ಎರಡು ಬಸ್ಸುಗಳ ನಡುವೆ ಸಿಲುಕಿದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇವರ ಜೊತೆಯಲ್ಲಿದ್ದ ನಾಲ್ವರು ಮಹಿಳೆಯರಾದ ರೇಣುಕಾ, ಅನುಸೂಯ, ಪುಷ್ಪಾ ಹಾಗೂ ಮಂಜಮ್ಮ ಎಂಬುವವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ನಡೆದ ಕೂಡಲೇ ಕೆಎಸ್ಸಾರ್ಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಮೃತ ಮಹಿಳೆಯರ ಮೃತದೇಹಗಳನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular