Friday, April 4, 2025
Google search engine

Homeಅಪರಾಧಕಾನೂನುಉದಯಗಿರಿ ಗಲಭೆ ಪ್ರಕರಣ: ಜಾಮೀನು ಕೋರಿ ಕೋರ್ಟ್‌ ಮೊರೆ ಹೋದ ಆರೋಪಿ

ಉದಯಗಿರಿ ಗಲಭೆ ಪ್ರಕರಣ: ಜಾಮೀನು ಕೋರಿ ಕೋರ್ಟ್‌ ಮೊರೆ ಹೋದ ಆರೋಪಿ

ಮೈಸೂರು: ಉದಯಗಿರಿ ಗಲಭೆ ಪ್ರಕರಣಕ್ಕೆ ಕಾರಣವಾದ ಸಾಮಾಜಿಕ ಜಾಲತಾಣದ ಪೋಸ್ಟ್‌ ಹಾಕಿದ್ದ ವ್ಯಕ್ತಿ ಪರ ಜಾಮೀನು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನಾಳೆಗೆ ಪ್ರಕರಣ ಮುಂದೂಡಿದೆ.

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋಧಾನಕಾರಿ ಪೋಸ್ಟ್‌ ಹಾಕಿದ್ದ ಆರೋಪದ ಮೇಲೆ ಪಾಂಡುರಂಗ ಅಲಿಯಾಸ್‌ ಸತೀಶ್‌ ಎಂಬಾತನನ್ನು ಉದಯಗಿರಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದರು. ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆ ೨೯೯ ಅಡಿ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಅದೇ ದಿನ ರಾತ್ರಿ ೨.೩೦ಕ್ಕೆ ನ್ಯಾಯಾಧೀಶರ ಎದುರು ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಆರೋಪಿ ಪರ ವಕೀಲ ಅ.ಮ.ಭಾಸ್ಕರ್‌ ಮಂಗಳವಾರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸರಕಾರಿ ವಕೀಲರು ಗುರುವಾರ ಅಬ್ಜೆಕ್ಷನ್‌ ಫೈಲ್‌ ಮಾಡಿದ ಹಿನ್ನೆಲೆಯಲ್ಲಿ ನಗರದ ೨ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯದ (ಕಿರಿಯ ಶ್ರೇಣಿ) ನ್ಯಾಯಧೀಶೆ ಸರೋಜ ಅವರು ಇಂದು ಪ್ರಕರಣದ ವಿಚಾರಣೆ ನಡೆಸಿದರು.

ಈ ವೇಳೆ ಆರೋಪಿ ಪರ ವಕೀಲರಾದ ಅ.ಮ.ಭಾಸ್ಕರ್‌ , ಪಾಂಡುರಂಗಗೆ ಜಾಮೀನು ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸರಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್‌ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಆರೋಪಿ ಪರ ವಕೀಲರು ಆಕ್ಷೇಪಿಸಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ವ್ಯಕ್ತಿಯನ್ನು ಪೊಲೀಸ್‌ ಕಸ್ಟಡಿಗೆ ಪಡೆಯುವ ಉದ್ದೇಶವಾದರು ಏನು ಎಂದು ಪ್ರಶ್ನಿಸಿದರು. ಆಗ ಸರಕಾರಿ ವಕೀಲರು, ಆರೋಪಿಯ ಮೊಬೈಲ್‌ ಫೋನ್‌ ವಶಕ್ಕೆ ಪಡೆಯಬೇಕಾಗಿದೆ ಎಂದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ವಕೀಲ ಅ.ಮ.ಭಾಸ್ಕರ್‌,‌ ಆರೋಪಿ ಪಾಂಡುರಂಗನಿಂದ ಮೊಬೈಲ್‌ ಫೋನ್‌ ಅನ್ನೇ ವಶಕ್ಕೆ ಪಡೆಯದೇ ಹೇಗೆ ಆತನೇ ಸೋಷಿಯಲ್ ಮೀಡಿಯಾದಲ್ಲಿ ಪ್ರಚೋಧನಕಾರಿ ಪೋಸ್ಟ್‌ ಹಾಕಿದ ಎಂದು ಬಂಧಿಸಿದ್ದೀರಾ..? ಇದು ಕಾನೂನು ಬಾಹಿರ ಹಾಗೂ ೨೯೯ ರ ಅಡಿ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

ವಾದ-ವಿವಾದ ಆಲಿಸಿದ ನ್ಯಾಯಾಧೀಶರು, ಆರೋಪಿ ಪಾಂಡುರಂಗನನ್ನು ನಾಳೆ ಕೋರ್ಟ್‌ ಗೆ ಹಾಜರು ಪಡಿಸುವಂತೆ ಆದೇಶಿಸಿ ವಿಚಾರಣೆ ಮುಂದೂಡಿದರು.

RELATED ARTICLES
- Advertisment -
Google search engine

Most Popular