Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ- 7 ಹಡಗುಗಳು ಬೆಂಕಿಗಾಹುತಿ

ಉಡುಪಿ: ದೀಪಾವಳಿ ಪೂಜೆ ವೇಳೆ ಅಗ್ನಿ ಅವಘಡ- 7 ಹಡಗುಗಳು ಬೆಂಕಿಗಾಹುತಿ


ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಲಂಗರು ಹಾಕಿದ್ದ ಬೋಟ್​​ ನಲ್ಲಿ ಬೆಂಕಿ ಅಗ್ನಿ ಅವಘಡ ಸಂಭವಿಸಿದೆ.
ಪರಿಣಾಮ ಅಕ್ಕ ಪಕ್ಕದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ವ್ಯಾಪಿಸಿದ್ದು, ಏಳು ಹಡಗುಗಳು ಬೆಂಕಿಗಾಹುತಿಯಾಗಿವೆ.
ದೀಪಾವಳಿ ಪ್ರಯುಕ್ತ ಇಂದು ಗಂಗೊಳ್ಳಿ ಬಂದರಿನಲ್ಲಿ   ಪೂಜೆ ನಡೆಯುತ್ತಿದ್ದ ವೇಳೆ ಏಕಾಏಕಿ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿದು ಕೂಡಲೇ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದ್ದು, ದುರಂತದಲ್ಲಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

RELATED ARTICLES
- Advertisment -
Google search engine

Most Popular