ಉಡುಪಿ: ಉಡುಪಿಯ ನೇಜಾರಿನಲ್ಲಿ ಭೀಕರ ಹತ್ಯೆ ಪ್ರಕರಣ ನಡೆದ ಮನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉಡುಪಿಯಲ್ಲಿ ಬೆಚ್ಚಿ ಬೀಳುವ ಘಟನೆ ಆಗಿದ್ದು, ಆರೋಪಿ ಕುಟುಂಬದ ನಾಲ್ಕ ಸದಸ್ಯರನ್ನು ಅಮಾನುಷವಾಗಿ ಕೊಂದಿದ್ದಾನೆ, ರಾಕ್ಷಸ ಕೃತ್ಯ ಎಸಗಿದ್ದಾನೆ. ಇಂದು ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದು, ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ನೊಂದ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಪಡುತ್ತೇವೆ ಎಂದರು.
ಕುಟುಂಬದ ಸದಸ್ಯರು ಫಾಸ್ಟ್ ಟ್ರಾಕ್ ನ್ಯಾಯಾಲಯದ ಮೂಲಕ ತನಿಖೆಗೆ ಒತ್ತಾಯಿಸಿದ್ದಾರೆ. ಮನೆಯವರು ಒಬ್ಬರ ಹೆಸರು ಕೊಟ್ಟಿದ್ದಾರೆ ಅವರ ಮೂಲಕ ತನಿಖೆ ಮಾಡುತ್ತೇವೆ. ತಾನು ಬೆಳಗಾವಿಯಲ್ಲಿ ಇದ್ದ ಕಾರಣ ಉಡುಪಿಗೆ ಬರುವುದಕ್ಕೆ ವಿಳಂಬವಾಗಿದೆ ಆದರೂ ಅಲ್ಲಿಂದಲೇ ನಾನು ಕುಟುಂಬದ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಂಪರ್ಕದಲ್ಲಿ ಇದ್ದಿದ್ದೆ ಎಂದರು.
ಮಾಜಿ ಶಾಸಕ ಗೋಪಾಲ ಪೂಜಾರಿ ನಾಯಕ ಪ್ರಸಾದ್ ರಾಜ್ ಕಾಂಚನ್, ದೀನೇಶ್ ಹೆಗ್ಡೆ, ಜಿಪಂ ಸಿಇಒ ಪ್ರಸನ್ನ ಹೆಚ್, ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ರಮೇಶ್ ಕಾಂಚನ್, ಡಾ. ಸುನೀತಾ ಶೆಟ್ಟಿ, ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಇತರರು