Tuesday, April 8, 2025
Google search engine

Homeರಾಜ್ಯUG-CET ಪ್ರವೇಶ ಪತ್ರ ಬಿಡುಗಡೆ

UG-CET ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎ.16 ಮತ್ತು 17ರಂದು ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ)ಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.

ಅಭ್ಯರ್ಥಿಗಳು, ಕೆಇಎ ವೆಬ್‌ಸೈಟ್‌ನಲ್ಲಿ ಯುಜಿಸಿಇಟಿ-25 ಪ್ರವೇಶ ಪತ್ರ ಎನ್ನುವ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ ತಮ್ಮ ಲಾಗಿನ್‌ ಐಡಿ ಸಂಖ್ಯೆ, ಹೆಸರು ದಾಖಲಿಸುವ ಮೂಲಕ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಎ. 15ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೂ ಇದೇ ಪ್ರವೇಶ ಪತ್ರ ಅನ್ವಯ ಆಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ತಿಳಿಸಿದ್ದಾರೆ.

ಇದೇ ಮೊದಲ ಬಾರಿಗೆ ಒಟಿಪಿ ಮತ್ತು ಮುಖಚಹರೆ ಆಧಾರಿತ ಲಾಗಿನ್‌ ವ್ಯವಸ್ಥೆ ಮಾಡಲಾಗಿದೆ. ಈ ಸಲದ ಪ್ರವೇಶ ಪತ್ರದಲ್ಲಿ ಪ್ರಮುಖವಾಗಿ ಕ್ಯುಆರ್‌ ಕೋಡ್‌ ಇದೆ. ಜತೆಗೆ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎಂದು ಮಾದರಿ ಒಎಂಆರ್‌ ಶೀಟ್‌ ಹಾಗೂ ಮಾರ್ಗಸೂಚಿ ಪಟ್ಟಿ-ಹೀಗೆ ಒಟ್ಟು ಎರಡು ಪುಟಗಳಿದ್ದು ಅವುಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಓದಿಕೊಳ್ಳಬೇಕು. ಮಾದರಿ ಒಎಂಆರ್‌ ಶೀಟ್‌ ಅನ್ನೂ ವಿದ್ಯಾರ್ಥಿಗಳು ಅಭ್ಯಾಸಕ್ಕೆ ಬಳಸಬೇಕು. ಆ ಮೂಲಕ ಪರೀಕ್ಷೆ ಸಂದರ್ಭ ಆಗುವ ತಪ್ಪುಗಳಿಂದ ಪಾರಾಗಬಹುದು ಎಂದು ಸಲಹೆ ನೀಡಿದ್ದಾರೆ.

ವಿದ್ಯಾರ್ಥಿಯ ಮುಖ ಚಹರೆಯನ್ನು ಆತ ಅರ್ಜಿಯ ಜತೆ ಸಲ್ಲಿಸಿರುವ ಪೋಟೋದ ಜತೆ ಮೊಬೈಲ್‌ ಆ್ಯಪ್‌ ಮೂಲಕ ತಾಳೆ ನೋಡಿ ಖಚಿತಪಡಿಸಿಕೊಂಡು ಪರೀಕ್ಷಾ ಕೊಠಡಿಗೆ ಬಿಡಲಾಗುವುದು. ಹಾಗೆಯೇ ಸಿಇಟಿಗೆ ಸಲ್ಲಿಸಿದ ಅರ್ಜಿಗಳಲ್ಲಿ ತಿದ್ದುಪಡಿಗಳಿದ್ದಲ್ಲಿ, ಮೀಸಲಾತಿ ಕ್ಲೈಮ್‌ ಮಾಡುವಲ್ಲಿ ಗೊಂದಲಗಳಾಗಿದ್ದಲ್ಲಿ ಅಥವಾ ಕ್ಲೈಮ್‌ ಮಾಡಿಲ್ಲದಿದ್ದರೆ ಲೋಪವನ್ನು ಸರಿಪಡಿಸಿ ಕೊಳ್ಳಲು ಸಿಇಟಿ ಪರೀಕ್ಷೆ ನಡೆದ ಬಳಿಕ ಅವಕಾಶ ಕಲ್ಪಿಸುತ್ತೇವೆ. ಈಗ ಇಂತಹ ವಿಷಯದ ಬಗ್ಗೆ ತಲೆ ಕೆಡಿಸಿಕೊಳ್ಳದೆ ಪರೀಕ್ಷೆ ಬರೆಯುವ ಬಗ್ಗೆ ಗಮನ ಹರಿಸಬೇಕು. ಸಿಲೆಬಸ್‌ಗೆ ಅನುಗುಣವಾಗಿ ಪ್ರಶ್ನೆಗಳು ಬರಲಿವೆ ಎಂದು ಪ್ರಸನ್ನ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular