ಮಂಗಳೂರು (ದಕ್ಷಿಣ ಕನ್ನಡ): ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಸಾವು ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಘಟನೆ ಮೈಸೂರು ವಿಜಯ ನಗರದ ದೇವರಾಜ್ ಮೊಹಲ್ಲಾ ನಿವಾಸಿ ಕೀರ್ತನಾ ಎನ್.(21), ಮೃತರು ಮೈಸೂರು ಕುರುಬರ ಹಳ್ಳಿ4 ನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ.(21), ಮೃತರು ಮೈಸೂರು ಕೆ.ಆರ್.ಮೊಹಲ್ಲಾದ ರಾಮಾನುಜ ರಸ್ತೆಯ 11ನೇ ಕ್ರಾಸ್ ನಿವಾಸಿ ಪಾರ್ವತಿ ಎಸ್.(20), ಮೃತರು ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಘಟನೆ ಶನಿವಾರ ಬೆಳಗ್ಗೆ ರೆಸಾರ್ಟ್ ಗೆ ಆಗಮಿಸಿದ್ದ ಮೂವರು ಯುವತಿಯರು
ಇಂದು ರೆಸಾರ್ಟ್ ಮುಂಭಾಗದಲ್ಲಿರುವ ಈಜುಕೊಳದಲ್ಲಿ ನೀರಾಟವಾಡುತ್ತಿದ್ದರು. ಮೊಬೈಲನ್ನು ಈಜುಕೊಳದ ನೀರಿಗೆ ಗುರಿಯಾಗಿಸಿ ವೀಡಿಯೊ ರೆಕಾರ್ಡ್ ಚಾಲನೆಯಲ್ಲಿಟ್ಟು ಈಜುಕೊಳಕ್ಕೆ ಇಳಿದಿದ್ದರು. ಸರಿಯಾಗಿ ಈಜು ಬಾರದ ಯುವತಿಯರು ಆಳವಿರುವ ಕಡೆ ತೆರಳಿದ್ದರಿಂದ ಮುಳುಗಿ ಮೃತಪಟ್ಟಿರುವ ಶಂಕೆ ರೆಸಾರ್ಟ್ ಸಿಬ್ಬಂದಿ ಬಂದು ನೋಡಿದಾಗ ಘಟನೆ ಬೆಳಕಿಗೆ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್, ಉಳ್ಳಾಲ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.