ಕರಾಚಿ (ಪಾಕಿಸ್ತಾನ): ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷಪ್ರಾಶನ ಮಾಡಿಸಲಾಗಿದ್ದು, ಆತನಿಗೆ ಪ್ರಸ್ತುತ ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ.
ವಿಷಪ್ರಾಶಾನ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಆದರೆ ಈ ಬಗ್ಗೆ ಇನ್ನೂ ದೃಢೀಕರಿಸಲಾಗಿಲ್ಲ. ಕಳೆದ ಎರಡು ದಿನಗಳ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಮೂಲಗಳ ಪ್ರಕಾರ ದಾವೂದ್ ಇಬ್ರಾಹಿಂ ದಾಖಲಾಗಿರುವ ಆಸ್ಪತ್ರೆಗೆ ಬಿಗಿ ಭದ್ರತೆ ಮಾಡಲಾಗಿದ್ದು, ಆಸ್ಪತ್ರೆಗೆ ಬೇರೆ ಯಾರಿಗೂ ಪ್ರವೇಶಿಸಲು ಅವಕಾಶ ನಿರಾಕರಣೆ ಮಾಡಲಾಗಿದ್ದು ಕೇವಲ ಆಸ್ಪತ್ರೆಯ ಉನ್ನತ ಅಧಿಕಾರಿಗಳು, ಕುಟುಂಬದ ಸದಸ್ಯರಿಗೆ ಮಾತ್ರ ಭೇಟಿಗೆ ಅವಕಾಶ ನೀಡಲಾಗಿದೆ.
ಭಾರತಕ್ಕೆ ಮೋಸ್ಟ್ ವಾಂಟೆಡ್ ಭೂಗತ ಪಾತಕಿಯಾಗಿರುವ ದಾವೂದ್ ಇಬ್ರಾಹಿಂಗಾಗಿ ಮುಂಬೈ ಪೊಲೀಸರು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
ಜನವರಿಯಲ್ಲಿ, ದಾವೂದ್‌ನ ಸಹೋದರಿ ಹಸೀನಾ ಪಾರ್ಕರ್‌ನ ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಭೂಗತ ಲೋಕದ ಡಾನ್ ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾರೆ ಎಂದು ತಿಳಿಸಿದ್ದರು.