ಮೈಸೂರು : ಅಪರಿಚಿತ ವಾಹನವೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಗಾಯಗೊಂಡಿದ್ದಾರೆ.
ನಗರದ ಗಣಪತಿ ಸಚ್ಚಿದಾನಂದ ಆಶ್ರಮದ ಎದುರು ಘಟನೆ ನಡೆದಿದ್ದು, ಭಾಗ್ಯರಾಜ್ ಅವರನ್ನು ಡಿಆರ್‌ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಕಾಲಿಗೆ ಪೆಟ್ಟಾಗಿದೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ತಮ್ಮ ಸ್ವಗ್ರಾಮ ಹಳ್ಳಿಕೆರೆ ಹುಂಡಿಗೆ ತೆರಳುವಾಗ ಈ ಘಟನೆ ನಡೆದಿದೆ.