ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಸದನದ ನಾಯಕರನ್ನಾಗಿ ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯ ನಾಯಕರಾಗಿ ಜೆ.ಪಿ ನಡ್ಡಾ ಆಯ್ಕೆ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಸೇರಿದಂತೆ ಅವರ ಮಂತ್ರಿಮಂಡಲದ ಸದಸ್ಯರು ೧೮ ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿಯ ಭರ್ತೃಹರಿ ಮಹತಾಬ್ ಅವರು ಸದನದ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಬಾರಿ ಎನ್ಡಿಎ ೨೯೩ ಸ್ಥಾನಗಳೊಂದಿಗೆ ಬಹುಮತವನ್ನು ಹೊಂದಿದ್ದರೆ, ಬಿಜೆಪಿ ೨೪೦ ಸ್ಥಾನಗಳನ್ನು ಹೊಂದಿದೆ. ಪ್ರತಿಪಕ್ಷ ಬಿಜೆಪಿ ೨೩೪ ಸ್ಥಾನಗಳನ್ನು ಹೊಂದಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ತಮ್ಮ ಸ್ಥಳೀಯ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಿದಾಗ ಭಾರತದ ಶ್ರೀಮಂತ ಭಾಷಾ ವೈವಿಧ್ಯತೆಯು ಪೂರ್ಣವಾಗಿ ಪ್ರದರ್ಶಿಸಲ್ಪಟ್ಟಿತು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಾಸಕರು ಇಂಗ್ಲಿಷ್, ಸಂಸ್ಕೃತ, ಹಿಂದಿ, ಡೋಗ್ರಿ, ಬಂಗಾಳಿ, ಅಸ್ಸಾಮಿ ಮತ್ತು ಒಡಿಯಾ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಬಳಿಕ ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ರಾಜ್ಯಸಭೆಯಲ್ಲಿ ಸದನದ ನಾಯಕರನ್ನಾಗಿ ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯ ನಾಯಕರಾಗಿ ಜೆ.ಪಿ ನಡ್ಡಾ ಆಯ್ಕೆ ಮಾಡಲಾಗಿದೆ.