Sunday, April 20, 2025
Google search engine

Homeರಾಜ್ಯಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಏರ್ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ

ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಏರ್ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ

ಚಿಕ್ಕಬಳ್ಳಾಪುರ: ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಮರಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಶುಕ್ರವಾರ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅದ್ದೂರಿ ಸ್ವಾಗತ ಕೋರಲಾಯಿತು.

ವಿಮಾನ ನಿಲ್ದಾಣದ ಬಿವಿಐಪಿ ಲಾಂಚ್‌ನಿಂದ ಕುಮಾರಸ್ವಾಮಿ ಬರುತ್ತಿದ್ದಂತೆ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸಚಿವರನ್ನು ಬರಮಾಡಿಕೊಳ್ಳಲು ಮುಗಿಬಿದ್ದರು. ಹೂ ಮಾಲೆ ಹಾಕಿ, ಪುಷ್ಪ ಗುಚ್ಛ ನೀಡಿ ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡರು.

ಸಿಐಎಸ್‌ಎಫ್ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ಜೆಡಿಎಸ್ ಕಾರ್ಯಕರ್ತರನ್ನ ಚದುರಿಸಿದರು. ನಂತರ ಬೆಂಗಳೂರಿನತ್ತ ಹೊರಟ ಕುಮಾರಸ್ವಾಮಿ ಅವರಿಗೆ ವಿಮಾನ ನಿಲ್ದಾಣದ ಸಾದಹಳ್ಳಿ ಟೋಲ್ ಬಳಿ ಸಾವಿರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಸ್ವಾಗತ ಕೋರಿದರು. ಜೆಸಿಬಿ ಹಾಗೂ ಕ್ರೇನ್‌ಗಳ ಮೂಲಕ ಬೃಹತ್ ಸೇಬಿನ ಹಾರ ಹೂಮಾಲೆ ಹಾಕಿ ನಾಯಕನನ್ನು ಸ್ವಾಗತಿಸಿದರು.

RELATED ARTICLES
- Advertisment -
Google search engine

Most Popular