Thursday, January 8, 2026
Google search engine

Homeರಾಜ್ಯಅಮೆರಿಕದ ಪೆನ್ಸಿಲ್ವೇನಿಯಾವಿಶ್ವವಿದ್ಯಾಲಯದಿಂದ 'ವಿಷನರಿ ಲೀಡರ್‌ಶಿಪ್ ಅವಾರ್ಡ್' ಪ್ರದಾನ

ಅಮೆರಿಕದ ಪೆನ್ಸಿಲ್ವೇನಿಯಾವಿಶ್ವವಿದ್ಯಾಲಯದಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಪ್ರದಾನ

  • ಶಂಶೀರ್ ಬುಡೋಳಿ

ಜನಸಾಮಾನ್ಯರಲ್ಲಿ ಆರ್ಥಿಕಾಭಿವೃದ್ಧಿಯ ಸದೃಢ ದೃಢತೆಯನ್ನು ಮೂಡಿಸಿರುವ ನವೋದಯ ಸ್ವ ಸಹಾಯ ಗುಂಪುಗಳ ಕಾರ್ಯದಕ್ಷತೆ ಹಾಗೂ ಸಂಘಟನೆಯ ವಿಶೇಷ ಅಧ್ಯಯನಕ್ಕೆ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡವು ಮಂಗಳವಾರ ‌ಮಂಗಳೂರಿನ ಕೊಡಿಯಾಲ್‌ಬೈಲ್‌ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಗೆ ಭೇಟಿ ನೀಡಿತು. ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಸ್ಥಾಪಕ ಟ್ರಸ್ಟಿ, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರು ಮಹಿಳಾ ಸಬಲೀಕರಣದಲ್ಲಿ ಸಲ್ಲಿಸಿದ ಮಹತ್ ಸಾಧನೆಯನ್ನು ಗುರುತಿಸಿ “ವಿಷನರಿ ಲೀಡರ್‌ಶಿಪ್ ಅವಾರ್ಡ್ ” ನ್ನು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಮತ್ತು ತನ್ನ ತಂಡದ ವತಿಯಿಂದ ಈ ಸನ್ಮಾನ ಕಾರ್ಯಕ್ರಮವು ನಡೆಯಿತು. ಇಂದಿನ ಸ್ಪರ್ಧಾತ್ಮಕ ಆರ್ಥಿಕ ಪರಿಸ್ಥಿತಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಮೋಘ ಸಾಧನೆಗೈದಿದೆ. ಜೊತೆಗೆ ನವೋದಯ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರ ಏಳಿಗೆಗಾಗಿ ಶ್ರಮಿಸುತ್ತಿರುವ ಕಾರ್ಯವೈಖರಿ ಪ್ರಶಂಸನೀಯವೂ ಆಗಿದೆ. ಇದಕ್ಕೆಲ್ಲ ಕಾರಣಕರ್ತರಾದವರು ಎಸ್‌ಸಿಡಿಸಿಸಿ ಬ್ಯಾಂಕಿನ ಅಭಿವೃದ್ಧಿ ರೂವಾರಿ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರನ್ನು ಗೌರವಿಸಲಾಯಿತು.
ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ತನ್ನ ದೂರದೃಷ್ಟಿಯ ಪ್ರಭಾವಶಾಲಿ ನಾಯಕತ್ವದಿಂದ ಸಹಕಾರ ಕ್ಷೇತ್ರದ ಮೂಲಕ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷೆಯ ಯಶಸ್ಸನ್ನು ಕಂಡಿದ್ದಾರೆ. ಈಗಾಗಲೇ 40000ಕ್ಕೂ ಹೆಚ್ಚು ನವೋದಯ ಸ್ವಸಹಾಯ ಗುಂಪುಗಳಿದ್ದು, 4.50 ಲಕ್ಷಕ್ಕೂ ಹೆಚ್ಚು ನವೋದಯ ಕುಟುಂಬಗಳ ಸದಸ್ಯರ ಬಲವನ್ನು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಹೊಂದಿದೆ. ಸಹಕಾರ ಕ್ಷೇತ್ರದ ಮೂಲಕ ನವೋದಯ ಸ್ವಸಹಾಯ ಗುಂಪುಗಳ ಬಲವರ್ಧನೆಗೊಳಿಸಿರುವ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ತನ್ನ ಶ್ರೇಷ್ಠ ನಾಯಕತ್ವದಿಂದ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಗೌರವ ಮನ್ನಣೆ ಗಳಿಸಿಕೊಂಡಿದ್ದಾರೆ.

ಕಳೆದ 32 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಇವರು ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳಿಗೂ ಪಾತ್ರರಾಗಿರುತ್ತಾರೆ. ಇದೀಗ ಅಮೆರಿಕದ ಪ್ರತಿಷ್ಠಿತ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಅಧ್ಯಯನ ತಂಡ 15 ವರ್ಷಗಳಿಂದ ಎಸ್‌ಸಿಡಿಸಿಸಿ ಬ್ಯಾಂಕಿಗೆ ಆಗಮಿಸುತ್ತಿದೆ .

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರಿ ಬ್ಯಾಂಕ್ ನ ಪ್ರಮುಖರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular