ಆವರ್ತಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಶಶಿಕಲಾ ವೆಂಕಟೇಶ್ ಹಾಗೂ ಉಪಾಧ್ಯಕ್ಷರಾಗಿ ಸುಶೀಲಮ್ಮ ಅವಿರೋಧವಾಗಿ ಆಯ್ಕೆ
ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಆವರ್ತಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷರಾಗಿ ಶಶಿಕಲಾ ವೆಂಕಟೇಶ್ ಹಾಗೂ ಉಪಾಧ್ಯಕ್ಷರಾಗಿ ಸುಶೀಲಮ್ಮ ಅವಿರೋಧವಾಗಿ ಆಯ್ಕೆಯಾದರು.
ಮಂಗಳವಾರ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ಶಶಿಕಲಾ ವೆಂಕಟೇಶ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸುಶೀಲಮ್ಮ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಲೋಕೋಪಯೋಗಿ ಇಲಾಖೆಯ ಎಇಇ ವೆಂಕಟೇಶ್ ಘೋಷಣೆ ಮಾಡಿದರು.
ಗ್ರಾಮ ಪಂಚಾಯಿತಿ ಸದಸ್ಯ ಎಂ.ಬಿ ಶಿವಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯುವಂತೆ ಮಾಡುವ ಮೂಲಕ ಎಲ್ಲಾ ಕಾರ್ಯಕರ್ತರ ಪರವಾಗಿ ಕೆಲಸ ಮಾಡಲಾಗಿದೆ. ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವವರಿಗೆ ಅಭಿನಂದನೆಗಳು. ತಾಲೂಕಿನ ಸಚಿವರಾದಂತಹ ಕೆ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಪಂಚಾಯತಿ ವ್ಯಾಪ್ತಿನ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಎಂ.ಕೆ ಶಿವ, ವಿಂದ್ಯಾಶ್ರೀ, ಪುಷ್ಪಲತಾ, ಎ.ಎಸ್ ಮಂಜು, ಎಂ.ಬಿ ಶಿವಕುಮಾರ್, ಎಂ.ಟಿ ನಾಗಪ್ಪ, ಡಿ.ಎಂ ಮೋಹನ್ ಕುಮಾರ್, ಬಸಮಣಿ, ಅರಸತ, ಪಿಡಿಒ ಅಭಿ ಮಹಮದ್, ಕಾರ್ಯದರ್ಶಿ ಮಾದೇಶ್, ಬಿಲ್ ಕಲೆಕ್ಟರ್ ಯೋಗನಾಯಕ, ಮುಖಂಡರಾದ ಸೋಮಣ್ಣ, ಬಸವನಾಯಕ, ಚಂದ್ರೇಶ್, ಸ್ವಾಮಿ, ವೆಂಕಟೇಶ್, ಕುಮಾರ್ ಸೇರಿದಂತೆ ಇತರರು ಇದ್ದರು