ರಾಮನಗರ: ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ನಡುವೆ ಗಲಾಟೆ ನಡೆದ ಈ ಜಗಳ ಕೊಲೆಯಲ್ಲಿ(Murder) ಅಂತ್ಯ ಕಂಡಿದೆ.
ಟೋಲ್ನಲ್ಲಿ ಕೆಲಸ ಮಾಡ್ತಿದ್ದ ಪವನ್ ನಾಯಕ್(30) ಹತ್ಯೆಯಾದ ದುರ್ದೈವಿ.
ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಟೋಲ್ ಪ್ಲಾಜಾ(Sheshagirihalli Toll Plaza) ಬಳಿ ಟೋಲ್ ಪಡೆಯುವ ವಿಚಾರಕ್ಕೆ ಸಿಬ್ಬಂದಿ ಹಾಗೂ ಕಾರಿನಲ್ಲಿ ಬಂದಿದ್ದ ಯುವಕರ ನಡುವೆ ಜಗಳವಾಗಿದ್ದು, ಇದನ್ನೇ ಮನಸಿನಲ್ಲಿಟ್ಟುಕೊಂಡಿದ್ದ ಯುವಕರು ಟೋಲ್ ನಲ್ಲಿ ಕೆಲಸ ಮಾಡ್ತಿದ್ದ ಪವನ್ ನಾಯಕ್ ನನ್ನು ಹತ್ಯೆ ಮಾಡಿದ್ದಾರೆ.
ನಿನ್ನೆ ರಾತ್ರಿ ಹತ್ತು ಗಂಟೆ ಸುಮಾರಿಗೆ ಟೋಲ್ ಬಳಿ ಗಲಾಟೆ ನಡೆದಿತ್ತು. ಬಳಿಕ ರಾತ್ರಿ 12 ಗಂಟೆಗೆ ಕೆಲಸ ಮುಗಿಸಿಕೊಂಡು ಬೆಂಗಳೂರು ದಕ್ಷಿಣ ತಾಲೂಕಿನ ಕರಿಕಲ್ ತಾಂಡ್ಯ ನಿವಾಸಿ ಪವನ್ ಕುಮಾರ್ ಊಟಕ್ಕೆಂದು ಹೊರಟ್ಟಿದ್ದ. ಈ ವೇಳೆ ಪವನ್ ನನ್ನು ಹಿಂಬಾಲಿಸಿದ ಯುವಕರು ಆತನ ಮೇಲೆ ಹಾಕಿ ದೊಣ್ಣೆಯಿಂದ ಹೊಡೆದು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ.
ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹತ್ಯೆ ಮಾಡಿದ ಆರೋಪಿಗಳಿಗಾಗಿ ಬಿಡದಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.
ಮೃತ ದೇಹವನ್ನು ಬೆಂಗಳೂರು ರಾಜರಾಜೇಶ್ವರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.