ಮಂಡ್ಯ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ, ಎಸ್ ಟಿ ಅಭಿವೃದ್ಧಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗೆ 11ಸಾವಿರ ಕೋಟಿ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. 7D ಪ್ರಕಾರ ಹಣವನ್ನು ನಿಮ್ಮ ಯೋಜನೆಗೆ ಬಳಕೆ ಯಾಕೆ ಮಾಡ್ತಿದ್ದಿರಿ? ಕೂಡಲೇ ಹಣ ಬಳಕೆ ಬಿಟ್ಟು ಅಭಿವೃದ್ಧಿ ಮಾಡಿ ಎಸ್ ಸಿ, ಎಸ್ ಟಿ ಅಭಿವೃದ್ಧಿ ಹಣ ಬಳಕೆ ಮಾಡಿದ್ರೆ ಉಗ್ರಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.