Sunday, April 20, 2025
Google search engine

Homeರಾಜ್ಯಹುಲಿ ಉಗುರು ಬಳಕೆ: ತಪ್ಪಿತಸ್ಥರ ವಿರುದ್ಧ ಕಾನೂನಿನಂತೆ ಕ್ರಮ-  ಈಶ್ವರ ಖಂಡ್ರೆ

ಹುಲಿ ಉಗುರು ಬಳಕೆ: ತಪ್ಪಿತಸ್ಥರ ವಿರುದ್ಧ ಕಾನೂನಿನಂತೆ ಕ್ರಮ-  ಈಶ್ವರ ಖಂಡ್ರೆ

ಕಲಬುರಗಿ: ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ನೆಲದ ಕಾನೂನು ಬಳಕೆ ಮಾಡಲಾಗುವುದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಪ್ರಾಣಿಗಳನ್ನು ಹತ್ಯೆ ಮಾಡಿ ಅವುಗಳ ಹಲ್ಲು, ಚರ್ಮ, ಕೊಂಬು ಹಾಗೂ ಇತರೆ ಅಂಗಗಳ ಬಳಕೆ ಮಾಡಿರುವುದು ಬಯಲಾಗಿ ಶಿಕ್ಷೆಗೆ ಒಳಗಾಗಿದ್ದಾರೆ. ಈಗ ರಾಜ್ಯದಲ್ಲೂ ನಡೆಯುತ್ತಿರುವ ವಿದ್ಯಾಮಾನಗಳಲ್ಲಿ ಹುಲಿ ಉಗುರು ಬಳಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ಬಂಧನಗಳಾಗಿವೆ. ತಪ್ಪಿತಸ್ಥರ ವಿರುದ್ಧ ನೆಲದ ಕಾನೂನಿನಂತೆ ಕ್ರಮ ಜರುಗುಸಲಾಗುವುದು ಎಂದರು.

ಕನ್ನಡ ಚಲನಚಿತ್ರ ನಟ ದರ್ಶನ್ ತೂಗುದೀಪ ಹಾಗೂ ವಿನಯ ಗುರೂಜಿ ಸಾರ್ವಜನಿಕವಾಗಿ ಹುಲಿ ಉಗುರು ಧರಿಸಿದ್ದಾರೆ ಎನ್ನುವ ಕುರಿತು ಕ್ರಮ ಜರುಗಿಸಲು ಅಧಿಕಾರಿಗಳು ಬದ್ಧರಾಗಿದ್ದಾರೆ. ಸಾರ್ವಜನಿಕರು ಈ ನಿಟ್ಟಿನಲ್ಲಿ ದೂರು ನೀಡಿದರೆ, ನೆಲದ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದರು.

ಪ್ರಾಣಿಜನ್ಯ ವಸ್ತುಗಳ ಬಳಕೆ ಸಂಗ್ರಹ, ಸಾಗಾಟ ಮೊದಲಿನಿಂದಲೂ ನಿಷೇಧ ಮಾಡಲಾಗಿದೆ. ಈ ಅಪರಾಧಕ್ಕೆ ಏಳು ವರ್ಷದ ಶಿಕ್ಷೆಯೂ ಇದೆ ಎಂದರು.

ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ ಇದ್ದರು.

RELATED ARTICLES
- Advertisment -
Google search engine

Most Popular