ಚಾಮರಾಜನಗರ: ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟ ಪ್ರತಿ ವರ್ಷ ನೀಡುವ ರಾಜ್ಯ ಯುವ ಪ್ರಶಸ್ತಿಗೆ ಕೊಳ್ಳೇಗಾಲದ ವಿ ನಾಗಶ್ರೀ ರವರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಬಾಲಾಜಿ ಹಾಗೂ ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದ್ದಾರೆ.
ರಾಷ್ಟ್ರದ ಯುವಶಕ್ತಿ ಸದಾಕಾಲ ಸ್ಪೂರ್ತಿ ಚೈತನ್ಯ ಹಾಗೂ ಕ್ರಿಯಾಶೀಲ ಚಟುವಟಿಕೆಗಳ ಮೂಲಕ ತಮ್ಮ ಶಕ್ತಿಯನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜಕ್ಕೆ ಸೇವಾ ಗುಣವನ್ನು ಬೆಳೆಸಿಕೊಳ್ಳುವುದು ಮಹತ್ತರವಾದ ಕಾರ್ಯವಾಗಿದೆ . ರಾಜ್ಯದ ಯುವಕರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಪ್ರತಿವರ್ಷ ಕರ್ನಾಟಕ ರಾಜ್ಯ ಯುವ ಸಂಘಟನೆಗಳ ಒಕ್ಕೂಟವು ಕರ್ನಾಟಕದ ಎಲ್ಲ ಜಿಲ್ಲೆಗಳ ಯುವಕರನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನಡೆಸುತ್ತಿದೆ.
ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನದ ಅಂಗವಾಗಿ ಇದೆ 17 ಮತ್ತು 18ರಂದು ಸುಬ್ರಹ್ಮಣ್ಯದ ಸಮೀಪದ ಪಂಜದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಸಂಘಟನೆಗಳ ಒಕ್ಕೂಟದ ಆಶಯದಲ್ಲಿ ನಡೆಯುತ್ತಿರುವ ಎರಡು ದಿನಗಳ ಬೃಹತ್ ಯುವಜನ ಸಮಾವೇಶದಲ್ಲಿ ಗೌರವಿಸಲಾಗುವುದು.
ಕೊಳ್ಳೇಗಾಲದ ವೆಂಕಟೇಶ್ ಅವರ ಪುತ್ರಿ ವಿ ನಾಗಶ್ರೀ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ.



