Friday, April 11, 2025
Google search engine

Homeಅಪರಾಧಕಾನೂನುಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ

ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ವಲ್ಲೂರಿ ಕಾಮೇಶ್ವರ ರಾವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಗೌರವಾನ್ವಿತ ನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ ರಾವ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಇಂದು ರಾಜಭವನದ ಗಾಜಿನಮನೆಯಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳಿಗೆ ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯ ನ್ಯಾಯಮೂರ್ತಿಗಳಾದ ನಿಲಯ್ ವಿಪಿನ್‍ಚಂದ್ರ ಅಂಜಾರಿಯಾ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್ ಸೇರಿದಂತೆ ನ್ಯಾಯಮೂರ್ತಿಗಳು, ವಕೀಲರು, ಗಣ್ಯರುಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular