Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಬಂಧನ

ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೊಟ್ಯಾಂತರ ರೂ. ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಶುಕ್ರವಾರ ಇಡಿ ಬಂಧಿಸಿದೆ.

ಈ ಹಗರಣ ಪ್ರಕರಣ ಸಂಬಂಧ ಇಡಿಯ ನಾಲ್ವರು ಅಧಿಕಾರಿಗಳ ತಂಡವು ಇಂದು ವಿಚಾರಣೆಗೆ ನಾಗೇಂದ್ರ ಅವರ ಮನೆಗೆ ಆಗಮಿಸಿತ್ತು. ಬಳಿಕ ಮಾಜಿ ಸಚಿವರನ್ನ ವಶಕ್ಕೆ ಪಡೆದಿದ್ದ ಇಡಿ ಅಧಿಕಾರಿಗಳು ಸತತ ವಿಚಾರಣೆಗೆ ಒಳಪಡಿಸಿದ್ದರು. ನಂತರ ಶಾಂತಿನಗರ ಇಡಿ ಕಚೇರಿಗೆ ಕರೆದುಕೊಂಡು ಹೋಗಿದ್ದರು.

ಈಗಾಗಲೇ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಿದೆ. ಇದರ ಬೆನ್ನಲ್ಲೇ ಜುಲೈ ೧೦ರಂದು ಇಡಿ ಮಾಜಿ ಸಚಿವ ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಮಹತ್ವದ ದಾಖಲೆಗಳನ್ನು ಕಲೆ ಹಾಕಿತ್ತು.

ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಅವರ ಮನೆ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಮಾಜಿ ಸಚಿವ ನಾಗೇಂದ್ರ ಅವರ ಆಪ್ತ ಹಾಗೂ ಅವರ ಪಿಎ ಹರೀಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಆತ ನೀಡಿದ ಕೆಲ ಮಾಹಿತಿಯ ಆಧಾರದ ಮೇರೆಗೆ ಇಂದು ನಾಗೇಂದ್ರ ಅವರನ್ನು ವಶಕ್ಕೆ ಪಡೆಯಲಾಗಿದೆ.

RELATED ARTICLES
- Advertisment -
Google search engine

Most Popular