ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನು ಅರ್ಜಿಯ ಭವಿಷ್ಯ ಇಂದು ಪ್ರಕಟವಾಗಲಿದೆ.
ಇಂದು ನಾಗೇಂದ್ರ ಅವರ ಜಾಮೀನು ತೀರ್ಪು ಪ್ರಕಟವಾಗುವ ಸಾಧ್ಯತೆಯಿದೆ. ಆದ್ದರಿಂದ ಸಿಟಿ ಸಿವಿಲ್ ನ್ಯಾಯಾಲಯದತ್ತ ಎಲ್ಲರ ಗಮನ ನೆಟ್ಟಿದೆ. ಈಗಾಗಲೇ ನಾಗೇಂದ್ರ ವಿರುದ್ಧ ಇಡಿ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಪಡೆದಿದ್ದಾರೆ. ಸದ್ಯ ಸೆಂಟ್ರಲ್ ಜೈಲಲ್ಲಿರೋ ಮಾಜಿ ಸಚಿವರಿಗೆ ಜಾಮೀನು ದೊರೆತರಷ್ಟೇ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ.
ಇನ್ನು ಒಂದು ಕಡೆ ಇಂದು ಮಾಜಿ ಸಚಿವ ನಾಗೇಂದ್ರ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರ ಜಾಮೀನು ತೀರ್ಪು ಕೂಡ ಹೊರಬೀಳಲಿದೆ.