Friday, April 11, 2025
Google search engine

Homeರಾಜ್ಯವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಡಾ.ಕೆ.ಸುಧಾಕರ್

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂ, ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಅಹಿಂದ ವರ್ಗಗಳ ಹೆಸರಿನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್ ಅದೇ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ಜು ಐಷರಾಮಿ ಕಾರು, ಮದ್ಯ ಖರೀದಿಗೆ ಬಳಸಿದ್ದಾರೆ. ತೆಲಂಗಾಣ ರಾಜ್ಯದ ಚುನಾವಣೆಗೆ ಬಳಿಸಿದ್ದಾರೆಂದು ಡಾ.ಕೆ.ಸುಧಾಕರ್  ಆರೋಪಿಸಿದರು.

14, 15 ತಿಂಗಳಲ್ಲಿ ರಾಜ್ಯ ಸರ್ಕಾರದ ಬಗ್ಗೆ ರಾಜ್ಯದ ಜನ ಭ್ರಮ ನಿರಸನಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಹಗರಣ ದೇಶದಲ್ಲಿ ಈ ರೀತಿ ನೋಡಿಲ್ಲ. ಸಹಕಾರ ಕ್ಷೇತ್ರದಲ್ಲಿ ಕೂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು.

RELATED ARTICLES
- Advertisment -
Google search engine

Most Popular