Monday, April 21, 2025
Google search engine

Homeರಾಜ್ಯವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಮಂಜೂರು

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಮಂಜೂರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. ೨ ಲಕ್ಷದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ ನೀಡಲಾಗಿದೆ.

ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಇತ್ತೀಚೆಗೆ 4,970 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದರು. 187 ಕೋಟಿ ರೂಪಾಯಿ ಹಗರಣ ಸಂಬಂಧ 4ಸಾವಿರದ 970 ಪುಟಗಳ ಚಾರ್ಜ್‌ಶೀಟ್ ಜೊತೆಗೆ 144 ಪುಟಗಳ ದೂರು ಸಲ್ಲಿಸಿದ್ದರು. ಇಡಿ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ A1 ಆಗಿದ್ದರು.

ನಾಗೇಂದ್ರ ಮತ್ತು ಆತನ ಗ್ಯಾಂಗ್ ಅಕ್ರಮ ನಡೆಸಿರುವುದು ಇಡಿ ತನಿಖೆಯಲ್ಲಿ ದೃಢವಾಗಿತ್ತು. ೧೮೭ ಕೋಟಿಯಲ್ಲಿ ರೂ. ಒಟ್ಟು ೮೪ ಕೋಟಿ ರೂಪಾಯಿ ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು.ಅಕ್ರಮವಾಗಿ ಹಣ ಬಳಸಲು ನಾಗೇಂದ್ರ ಒಳಸಂಚು ಮಾಡಿದ್ದಾರೆ. ಜೊತೆಗೆ ಸಾಕ್ಷಿ ನಾಶ ಮಾಡಲು ಸಂಚು ರೂಪಿಸಿದ್ದಾರೆ ಅಂತಾ ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿತ್ತು.

RELATED ARTICLES
- Advertisment -
Google search engine

Most Popular