Wednesday, April 9, 2025
Google search engine

Homeರಾಜ್ಯಸುದ್ದಿಜಾಲಕಲಬುರಗಿ–ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು:ಮಾರ್ಚ್ 12ರಂದು ಪ್ರಧಾನಿ ಮೋದಿ ಚಾಲನೆ

ಕಲಬುರಗಿ–ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು:ಮಾರ್ಚ್ 12ರಂದು ಪ್ರಧಾನಿ ಮೋದಿ ಚಾಲನೆ

ಕಲಬುರಗಿ: ಈ ಭಾಗದ ಜನತೆಯ ಬಹು ದಿನಗಳ ಬೇಡಿಕೆಯಾಗಿದ್ದ ಕಲಬುರಗಿ–ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲನ್ನು ಓಡಿಸಲು ನಿರ್ಧರಿಸಲಾಗಿದ್ದು, ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ.

ಈ ಕುರಿತು ವಿಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಸಂಸದ ಡಾ. ಉಮೇಶ್ ಜಾಧವ್, ‘ನಮ್ಮ ಬೇಡಿಕೆಗೆ ಸ್ಪಂದಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್ ರೈಲಿಗೆ ಅನುಮೋದನೆ ನೀಡಿದ್ದು, ಪ್ರಧಾನಿಯವರು ಉದ್ಘಾಟಿಸಲಿರುವ ವಿವಿಧ ಕಾರ್ಯಕ್ರಮಗಳ ಪಟ್ಟಿಯಲ್ಲಿ ವಂದೇ ಭಾರತ್ ಸಹ ಇದೆ. ಇತ್ತೀಚೆಗಷ್ಟೇ ಕಲಬುರಗಿ–ಬೆಂಗಳೂರು ಮಧ್ಯೆ ವಾರದ ರೈಲನ್ನು ಘೋಷಿಸಿದ್ದರು’ ಎಂದು ತಿಳಿಸಿದ್ದಾರೆ.

ವಾರದ ರೈಲು ಮಾರ್ಚ್ 9ರಂದು ಉದ್ಘಾಟನೆಯಾಗಲಿದ್ದು, ವಂದೇ ಭಾರತ್ ರೈಲು ಮಾ 12ರಂದು ಪ್ರಧಾನಿಯವರಿಂದ ಉದ್ಘಾಟನೆಗೊಳ್ಳಲಿದೆ.

ಮುಂಬೈ–ಸೋಲಾಪುರ ಮಧ್ಯೆ ಸಂಚರಿಸುತ್ತಿರುವ ವಂದೇ ಭಾರತ್ ರೈಲನ್ನು ಕಲಬುರಗಿವರೆಗೆ ವಿಸ್ತರಿಸಬೇಕು ಎಂದು ಸಂಸದ ಡಾ. ಜಾಧವ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಕಲಬುರಗಿಯಲ್ಲಿ ಎರಡನೇ ಪಿಟ್‌ಲೈನ್ ನಿರ್ಮಾಣ ಕಾಮಗಾರಿಗೆ ಈಚೆಗೆ ಚಾಲನೆ ನೀಡಿದ್ದರು.

RELATED ARTICLES
- Advertisment -
Google search engine

Most Popular